ಉದಯವಾಹಿನಿ, ಚಿಕ್ಕಬಳ್ಳಾಪುರ: ವೀಕೆಂಡ್ ಹಿನ್ನೆಲೆ ನಂದಿಗಿರಿಧಾಮಕ್ಕೆ ಪ್ರವಾಸಿಗರು ದಂಡು ಹರಿದು ಬಂದಿದ್ದು, ಸಕಾಲಕ್ಕೆ ಪ್ರವೇಶ ಟಿಕೆಟ್ ಸಿಗದೇ ಪ್ರವಾಸಿಗರು ಪರದಾಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ವೀಕೆಂಡ್ ಹಿನ್ನೆಲೆ 10 ಸಾವಿರಕ್ಕೂ ಹೆಚ್ಚು ಪ್ರವಾಸಿಗರು ಆಗಮಿಸಿದ್ದರು. ಈ ಹಿನ್ನೆಲೆ ವಾಹನ ದಟ್ಟನೆಯಿಂದಾಗಿ ಗಿರಿಧಾಮ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ, ಪ್ರವಾಸಿಗರು ಪರದಾಡುವಂತಾಗಿತ್ತು.
ಅಲ್ಲದೇ ಪ್ರವೇಶ ಟಿಕೆಟ್ ವಿತರಿಸುವಲ್ಲಿ ಅವ್ಯವಸ್ಥೆ ಉಂಟಾಗಿ, ಟಿಕೆಟ್ ಪಡೆಯಲು ಪ್ರವಾಸಿಗರು ಮುಗಿಬಿದ್ದರು. ಸಾವಿರಾರು ಜನ ಪ್ರವಾಸಿಗರಿಗೆ 2 ಕೌಂಟರ್‌ನಲ್ಲಿ ಮಾತ್ರ ಟಿಕೆಟ್ ವಿತರಿಸಲಾಗಿತ್ತು. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಈ ಅವ್ಯವಸ್ಥೆಯ ವಿರುದ್ಧ ಪ್ರವಾಸಿಗರು ಆಕ್ರೋಶ ಹಾಕಿದ್ದಾರೆ.
ಸುರಿಯುವ ಮಳೆಯನ್ನೂ ಲೆಕ್ಕಿಸದೇ ಟಿಕೆಟ್‌ಗಾಗಿ ಮಹಿಳೆಯರು, ಮಕ್ಕಳು, ಯುವಕ-ಯುವತಿಯರೆನ್ನದೇ ಪ್ರವಾಸಿಗರು ಸಾಲುಗಟ್ಟಿ ನಿಂತಿದ್ದರು.
