ಉದಯವಾಹಿನಿ, ಚಿಕ್ಕಮಗಳೂರು: ಕಾಫಿನಾಡ ಮಲೆನಾಡ ಭಾಗದಲ್ಲಿ ಭಾರೀ ಗಾಳಿ-ಮಳೆ ಮುಂದುವರಿದ ಹಿನ್ನೆಲೆ ಮಲೆನಾಡು ಭಾಗದ ಶಾಲೆಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ. ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೀನಾ ಆದೇಶ ಹೊರಡಿಸಿದ್ದಾರೆ. ಕೊಪ್ಪ, ಶೃಂಗೇರಿ, ಮೂಡಿಗೆರೆ, ಎನ್‌ಆರ್ ಪುರ, ಕಳಸ ತಾಲೂಕಿನಲ್ಲಿ ರಜೆ ಘೋಷಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು, ವಸ್ತಾರೆ, ಖಾಂಡ್ಯ, ಆವತಿ, ಜಾಗರ ಹೋಬಳಿಗೆ ನಾಳೆ ಒಂದು ದಿನ ರಜೆ ಘೋಷಿಸಲಾಗಿದೆ.
ಪಶ್ಚಿಮ ಘಟ್ಟ ಹಾಗೂ ಮಲೆನಾಡು ಭಾಗದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ಜಿಲ್ಲೆಯಲ್ಲಿ ಆರೆಂಜ್ ಮತ್ತು ರೆಡ್ ಅಲರ್ಟ್ ಘೋಷಿಸಲಾಗಿದೆ.
