ಉದಯವಾಹಿನಿ, ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡ್ತಿರುವವರ ಮೇಲೆ ಸ್ವಯಂಪ್ರೇರಿತ ಕೇಸ್ ಹಾಕ್ಬೇಕು ಎಂದು ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಧರ್ಮಸ್ಥಳ ಅಸಹಜ ಸಾವು ಪ್ರಕರಣ ಸದನದಲ್ಲಿ ಉತ್ತರ ಕೊಡುವ ವಿಚಾರವಾಗಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಇವತ್ತು ಸದನದಲ್ಲಿ ಗೃಹ ಸಚಿವರು, ಸಿಎಂ, ಡಿಸಿಎಂ ಸದನದಲ್ಲಿ ಉತ್ತರ ಕೊಡಬೇಕಿದೆ. ಧರ್ಮಸ್ಥಳ ಪ್ರಕರಣದಲ್ಲಿ ಬಹಳ ಸ್ಪಷ್ಟವಾಗಿ ಉತ್ತರ ಕೊಡಲಿ. ಅನಾಮಿಕ ವ್ಯಕ್ತಿಯ ಬಗ್ಗೆಯು ತನಿಖೆ ಆಗಲಿ ಎಂದು ಹೇಳಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಆರೋಪಗಳನ್ನು ಮಾಡ್ತಿದ್ದಾರೆ. ಅವರ ಮೇಲೆ ಸ್ವಯಂಪ್ರೇರಿತ ಕೇಸ್ ಹಾಕಬೇಕು. ಹಿಂದೂ ಕಾರ್ಯಕರ್ತರ ಮೇಲೆ ಕಾಂಗ್ರೆಸ್‌ನವರು ಕಾರಣ ಇಲ್ಲದೇ ಸುಮೋಟೋ ಕೇಸ್ ಹಾಕ್ತಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡ್ತಿರುವವರ ಮೇಲೆ ಕೇಸ್ ಹಾಕಬೇಕು. ಪ್ರಕರಣದಲ್ಲಿ ಷಡ್ಯಂತ್ರ ಏನಾಗಿದೆ ಎಂದು ಹೇಳಬೇಕು. ಗಾಳಿಯಲ್ಲಿ ತೇಲಿಸುವ ಕೆಲಸ ಆಗಬಾರದು ಎಂದು ಆಗ್ರಹಿಸಿದ್ದಾರೆ. ಅನಾಮಿಕ ವ್ಯಕ್ತಿಯು ಸುಪ್ರೀಂ ಕೋರ್ಟ್ಗೆ ಲಾಯರ್‌ಗಳನ್ನ ಇಟ್ಟುಕೊಂಡಿದ್ದು, ಇಷ್ಟ ಬಂದ ಹಾಗೆ ಕಥೆಯನ್ನ ಸೃಷ್ಟಿ ಮಾಡ್ತಿದ್ದಾರೆ. ಅನಾಮಿಕ ವ್ಯಕ್ತಿಯ ಮೂಲಕ ಸುಳ್ಳನ್ನೆ ಸತ್ಯವನ್ನಾಗಿ ಮಾಡಲು ಹೊರಟಿದ್ದಾರೆ. ಇದನ್ನ ಪಿಎಫ್‌ಐ, ಎಸ್‌ಡಿಪಿಐ ಮಾಡ್ತಿದೆ. ಅನಾಮಿಕ ವ್ಯಕ್ತಿ ಹಾಗೂ ಆತನ ಹಿಂದಿರುವ ವ್ಯಕ್ತಿಯ ಬಗ್ಗೆ ತನಿಖೆಯಾಗಲಿ ಎಂದು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!