ಉದಯವಾಹಿನಿ, ಉಡುಪಿ: ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದ್ದ, ಇಂದು (ಆ.18) ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ (School) ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ದಿನವನ್ನು ಮುಂದಿನ ಶನಿವಾರ (ಆ.23) ರಂದು ಪೂರ್ತಿ ದಿನ ಶಾಲೆಯನ್ನು ನಡೆಸಿ, ಸರಿದೂಗಿಸಿಕೊಳ್ಳಲು ಆದೇಶದಲ್ಲಿ ಸೂಚಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿಯೂ ಸಹ ಧಾರಾಕಾರ ಮಳೆಯಾಗುತ್ತಿದ್ದು, ಅಂಗನವಾಡಿ, ಪ್ರಾಥಮಿಕ ಪ್ರೌಢಶಾಲೆ ಹಾಗೂ ಪದವಿಪೂರ್ವ, ಐಟಿಐ ಕಾಲೇಜು ರಜೆ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ ಹಿನ್ನೆಲೆ, ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಮುನ್ಸೂಚನೆ (Rain Alert) ನೀಡಲಾಗಿದೆ. ಕರಾವಳಿಯ ಮೂರು ಜಿಲ್ಲೆಗಳಿಗೆ ಭಾರಿ ಮಳೆ ಸಾಧ್ಯತೆಯಿದ್ದು, ಕರಾವಳಿ ಭಾಗದ ದಕ್ಷಿಣ ಕನ್ನಡ (Dakshina Kannada), ಉಡುಪಿ, ಉತ್ತರ ಕನ್ನಡ ಹಾಗೂ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
