ಉದಯವಾಹಿನಿ, ಸ್ಯಾಂಡಲ್‌ವುಡ್ ಕ್ವೀನ್ ರಮ್ಯಾಗೆ ಅಶ್ಲೀಲ ಕಾಮೆಂಟ್ ಹಾಕಿದ್ದವರ ಪೈಕಿ ಸಿಸಿಬಿ ಪೊಲೀಸರು ಮತ್ತೆ ಇಬ್ಬರನ್ನು ಬಂಧಿಸಿದ್ದು, ಈವರೆಗೂ ಒಟ್ಟು 9 ಜನರನ್ನು ಅರೆಸ್ಟ್ ಮಾಡಿದ್ದಾರೆ. ಉಡುಪಿ ಮೂಲದವರಾದ ಸುಜನ್ ಮತ್ತು ಆದರ್ಶ್ ಬಂಧಿತ ಯುವಕರು. ಇದಕ್ಕೂ ಮುನ್ನ ಸಿಸಿಬಿ ಪೊಲೀಸರು ಮಂಜುನಾಥ, ಭುವನ್ ಗೌಡ, ಪವನ್, ಓಬಣ್ಣ ಮತ್ತು ಗಂಗಾಧರ್ ಸೇರಿ ಒಟ್ಟು 9 ಯುವಕರನ್ನು ಬಂಧಿಸಿದ್ದರು.

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ನಟಿ ರಮ್ಯಾಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಮೆಸೇಜ್ ಕಳುಹಿಸಿದ್ದರು. ಇದರ ಬೆನ್ನಲ್ಲೇ ದರ್ಶನ್ ಫ್ಯಾನ್ಸ್ ವಿರುದ್ಧ ಗರಂ ಆದ ನಟಿ ಅಶ್ಲೀಲ ಮೆಸೇಜ್ ಕಳುಹಿಸಿದ್ದವರ ಖಾತೆಗಳನ್ನು ಬಹಿರಂಗಗೊಳಿಸಿದ್ದರು. ಜೊತೆಗೆ 43 ಅಕೌಂಟ್‌ಗಳ ವಿರುದ್ಧ ದೂರು ದಾಖಲಿಸಿದ್ದರು. ಇದರ ಬೆನ್ನಲ್ಲೇ ಕಿಡಿಗೇಡಿಗಳ ಪತ್ತೆಗಾಗಿ 6 ತಂಡವನ್ನ ರಚನೆ ಮಾಡಲಾಗಿತ್ತು.
ಕೊಲೆಯಾದ ಚಿತ್ರದುರ್ಗದ ರೇಣುಕಾಸ್ವಾಮಿಗೆ ನ್ಯಾಯ ಸಿಗುವ ಬಗ್ಗೆ ರಮ್ಯಾ ಪೋಸ್ಟ್ ಹಾಕಿದ್ದಕ್ಕೆ ಅಶ್ಲೀಲ ಕಾಮೆಂಟ್ ಮಾಡಿರುವುದು ಪೊಲೀಸರ ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರು ಸೇರಿದಂತೆ ಹಲವು ಕಡೆ ಕಿಡಿಗೇಡಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಈವರೆಗೂ ಸಿಸಿಬಿ ಪೊಲೀಸರು ಒಟ್ಟು 9 ಜನರನ್ನು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!