ಉದಯವಾಹಿನಿ, ನವದೆಹಲಿ: ಸಾಮಾನ್ಯವಾಗಿ ಸೆಲೆಬ್ರಿಟಿಗಳು ಸಾರ್ವಜನಿಕ ಸ್ಥಳದಲ್ಲಿ ಜೊತೆಯಾಗಿ ಕಾಣಿಸಿ ಕೊಂಡಾಗ ಅವರ ಬಗ್ಗೆ ಗಾಸಿಪ್ ಗಳು ಹರಿದಾಡುತ್ತಲೇ ಇರುತ್ತದೆ. ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಈ ಹಿಂದೆ ವಿದೇಶದ ಟ್ರಿಪ್ , ಸಿನಿಮಾ ಸಂಬಂಧಿತ ಕಾರ್ಯಕ್ರಮದಲ್ಲಿ ಜೊತೆಯಾಗಿ ಕಾಣಿಸಿಕೊಂಡು ಅದು ದೊಡ್ಡ ಮಟ್ಟಿಗೆ ಸುದ್ದಿ ಯಾಗಿತ್ತು. ಹಾಗಿದ್ದರೂ ಸಿನಿಮಾ ಕೆರಿಯರ್ ಗೆ ಇಬ್ಬರು ಅಧಿಕ ಪ್ರಾಶಸ್ತ್ಯ ನೀಡುತ್ತಿದ್ದು ವದಂತಿ ಗಳ ಬಗ್ಗೆ ಅವರು ತಲೆಕೆಡಿಸಿಕೊಂಡಿರಲಿಲ್ಲ. ಇದೀಗ ರಶ್ಮಿಕಾ ಹಾಗೂ ನಟ ವಿಜಯ್ ದೇವರಕೊಂಡ ಅವರು ಇತ್ತೀಚೆಗಷ್ಟೇ ನ್ಯೂಯಾರ್ಕ್‌ನಲ್ಲಿ ನಡೆದ ಇಂಡಿಯಾ ಡೇ ಪರೇಡ್ ನಲ್ಲಿ ಗ್ರ್ಯಾಂಡ್ ಮಾರ್ಷಲ್‌ಗಳಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ಮೂಲಕ ಪೆರೇಡ್‌ನಲ್ಲಿ ಭಾಗಿಯಾಗಿದ್ದ ಈ ಜೋಡಿಯ ಹಲವಾರು ಚಿತ್ರಗಳು ಮತ್ತು ವಿಡಿಯೋ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.
ಆಗಸ್ಟ್ 17 ರಂದು ಈ ಕಾರ್ಯಕ್ರಮ ನಡೆದಿದ್ದು, ವಿಶ್ವದಲ್ಲೇ ಅತಿ ದೊಡ್ಡದಾದ ಇಂಡಿಯಾ ಡೇ ಪೆರೇಡ್‌ನಲ್ಲಿ ವಿಜಯ್ ಮತ್ತು ರಶ್ಮಿಕಾ ಅವರು ಟ್ರೆಡಿಶನಲ್ ಡ್ರೆಸ್ ನಲ್ಲಿ ಭಾಗಿಯಾಗಿದ್ದಾರೆ. ನಟಿ ರಶ್ಮಿಕಾ ರೆಡ್ ಕಲರ್ ಕಸೂತಿ ವಿನ್ಯಾಸ ಉಟ್ಟು ಅದಕ್ಕೆ ಹೊಂದಿ ಕೊಳ್ಳುವ ಆಭರಣ ತೊಟ್ಟು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ನಟ ವಿಜಯ್ ದೇವರ ಕೊಂಡ ಅವರು ಕ್ರೀಂ ಕಲರ್ ಶೆರ್ವಾನಿ ಡ್ರೆಸ್ ತೊಟ್ಟು ಮದುಮಗನಂತೆ ಕಂಗೊಳಿಸಿದ್ದಾರೆ. ಈ ಜೋಡಿ ಇತರ ಗಣ್ಯರೊಂದಿಗೆ ವಾಹನವನ್ನು ಹತ್ತಿ ಮ್ಯಾಡಿಸನ್ ಅವೆನ್ಯೂ ಮಾರ್ಗದಲ್ಲಿ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು, ಅವರ ವಿಡಿಯೋ ವೈರಲ್ ಆಗುತ್ತಿದೆ.
ಭಾರತದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಅದ್ಧೂರಿಯಾಗಿ ಆಚರಿಸಿದ್ದು ಆಗಸ್ಟ್ 17ರ ಭಾನುವಾರ ನ್ಯೂಯಾರ್ಕ್‌ನಲ್ಲಿ ಅನಿವಾಸಿ ಭಾರತೀಯರು ಈ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವೈಭವಯುತವಾಗಿ ಆಚರಿಸಿದರು. ಈ ಕಾರ್ಯಕ್ರಮದಲ್ಲಿ ಸಾವಿರಾರು ಭಾರತೀಯ-ಅಮೆರಿಕನ್ನರು ಒಟ್ಟುಗೂಡಿದರು. ಇದರೊಂದಿದೆ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಕೂಡ ಒಟ್ಟಿಗೆ ಸಂಭ್ರಮಿಸಲಾಗಿದೆ. ಹೀಗಾಗಿ ನ್ಯೂಯಾರ್ಕ್ ನ ಇಸ್ಕಾನ್ ದೇಗುಲಕ್ಕೂ ಕೂಡ ನೂರಾರು ಭಕ್ತರು ಸೇರಿಕೊಂಡಿದ್ದರು.
