ಉದಯವಾಹಿನಿ, ಬೆಂಗಳೂರು: SC, ST ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಸಿಕ್ಕಿದ್ದು, ಇನ್ಮುಂದೆ ಹಾಸ್ಟೆಲ್‌ಗಳಲ್ಲಿ ‘ಸೋನಾ ಮಸೂರಿ’ಯಿಂದ ಮಾಡಿದ ಅನ್ನವನ್ನು ನೀಡಲಿದ್ದಾರೆ. ಈ ಬಗ್ಗೆ ಸಚಿವ ಹೆಚ್ ಸಿ ಮಹದೇವಪ್ಪ ನೇತೃತ್ವದಲ್ಲಿ ಇಂದು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯದ 31 ಜಿಲ್ಲೆಗಳ ಜಿಲ್ಲಾ ಕೇಂದ್ರ ಹಾಗೂ ತಾಲೂಕು ಮಟ್ಟದ ಎಸ್ ಸಿ ಹಾಗೂ ಎಸ್ ಟಿ ವಿದ್ಯಾರ್ಥಿನಿಲಯಗಳಲ್ಲಿ ಮಕ್ಕಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ ಅಂತ ತಿಳಿದು ಬಂದಿದೆ. ಇನ್ನೂ ಸರ್ಕಾರದಿಂದ ಸರಿ ಸುಮಾರು 2,50 ಲಕ್ಷ ಮಕ್ಕಳು ಈ ಪ್ರಯೋಜನವನ್ನು ಪಡೆದುಕೊಳ್ಳಲಿದ್ದಾರೆ ಅಂತ ತಿಳಿದು ಬಂದಿದೆ. ಈ ಹಿಂದೆ ಪಡಿತರದಾರರಿಗೆ ನೀಡಲಾಗುತ್ತಿದ್ದ ಅಕ್ಕಿಯನ್ನುಹಾಸ್ಟೆಲ್ ವಿದ್ಯಾರ್ಥಿಗಳಿಗೆ ಅಡುಗೆ ಮಾಡಲಾಗುತಿತ್ತು, ಅದು ಗುಣಮಟ್ಟದಿಂದ ಕೂಡಿರಲಿಲ್ಲ ಅಂತ ದೂರುಗಳು ಕೇಳಿ ಬರುತ್ತಿದ್ದವು, ಇದಲ್ಲದೇ ಮಕ್ಕಳ ಬೆಳಗವಣಿಗೆ ಅಗತ್ಯವಾಗುವ ನಿಟ್ಟಿನಲ್ಲಿ ಉತ್ತಮವಾದ ಆಹಾರವನ್ನು ನೀಡುವುದಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಕೂಡ.
