ಉದಯವಾಹಿನಿ, ರಾಯಚೂರು/ಯಾದರಿಗಿ: ಕೃಷ್ಣಾ ನದಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆ ಬಸವಸಾಗರ ಜಲಾಶಯದಿಂದ ನದಿಗೆ ನೀರು ಬಿಡಲಾಗುತ್ತಿದ್ದು, ಪರಿಣಾಮ ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿದೆ. ಭಾರೀ ಮಳೆಯ ಪರಿಣಾಮ ನಾರಾಯಣಪುರದ ಬಸವಸಾಗರ ಜಲಾಶಯಕ್ಕೆ ಸದ್ಯ 1.55 ಲಕ್ಷ ಕ್ಯೂಸೆಕ್ ಒಳಹರಿವು ಇದ್ದು, ಜಲಾಶಯದ ಸುರಕ್ಷತಾ ದೃಷ್ಟಿಯಿಂದ 1.60 ಲಕ್ಷ ಕ್ಯೂಸೆಕ್ ನೀರನ್ನು ಕೃಷ್ಣಾ ನದಿಗೆ ರಿಲೀಸ್ ಮಾಡಲಾಗಿದೆ. ಪರಿಣಾಮ ರಾಯಚೂರಿನ ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಮುಳುಗಡೆಯಾಗಿ, ಐದಾರು ಗ್ರಾಮಗಳ ರಸ್ತೆ ಸಂಪರ್ಕ ಕಡಿತವಾಗಿದೆ.
ಶೀಲಹಳ್ಳಿ, ಹಂಚಿನಾಳ, ಯರಗೋಡಿ ಮಾರ್ಗ ಸಂಪೂರ್ಣ ಬಂದ್ ಆಗಿದೆ. ಹೀಗಾಗಿ ಗ್ರಾಮಸ್ಥರು ಲಿಂಗಸುಗೂರಿಗೆ ತೆರಳಲು ಸುಮಾರು 45 ಕಿ.ಮೀ ಸುತ್ತುವರೆದು ಪ್ರಯಾಣಿಸಬೇಕಿದೆ. ಇನ್ನೂ ಹೆಚ್ಚು ಪ್ರಮಾಣದ ನೀರು ನದಿಗೆ ಹರಿದು ಬಂದಿದ್ದರಿAದ ರೈತರ ಪಂಪ್ ಸೆಟ್‌ಗಳು ನೀರಲ್ಲಿ ಮುಳುಗಿ ಹೋಗಿವೆ. ನೀರಿನ ಪ್ರಮಾಣ ಹೆಚ್ಚಾಗುತ್ತಿರುವುದರಿಂದ ಗ್ರಾಮಸ್ಥರಿಗೆ ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
