ಉದಯವಾಹಿನಿ, ಪಾಟ್ನಾ: ಬಿಹಾರ (Bihar) ಸರ್ಕಾರವು ರಾಜ್ಯದ ಎಲ್ಲಾ ನೇಮಕಾತಿ ಪರೀಕ್ಷೆಗಳ ಪ್ರಾಥಮಿಕ ಹಂತಕ್ಕೆ ಏಕರೂಪವಾಗಿ 100 ರೂ. ಶುಲ್ಕವನ್ನು ನಿಗದಿಪಡಿಸುವ ಪ್ರಮುಖ ನಿರ್ಧಾರವನ್ನು ಕೈಗೊಂಡಿದೆ. ಇದರ ಜೊತೆಗೆ, ಮುಖ್ಯ ಪರೀಕ್ಷೆಗೆ ಯಾವುದೇ ಶುಲ್ಕವನ್ನು ವಿಧಿಸದಿರಲು ಕೂಡ ನಿರ್ಧರಿಸಲಾಗಿದೆ.ಮುಖ್ಯಮಂತ್ರಿ ನಿತಿಶ್ ಕುಮಾರ್ (Nitish Kumar) ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾಮಾನ್ಯ ಆಡಳಿತ ಇಲಾಖೆ (ಜಿಎಡಿ) ಮುಂದಿಟ್ಟ ಈ ಕ್ರಮಕ್ಕೆ ಅನುಮೋದನೆ ನೀಡಲಾಗಿದೆ. ಈ ವರ್ಷದ ಕೊನೆಯಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ.
ಸರ್ಕಾರದ ಈ ಕ್ರಮವು ಅಭ್ಯರ್ಥಿಗಳಿಗೆ ಆರ್ಥಿಕ ಒತ್ತಡವನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ವಿಶೇಷವಾಗಿ ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ಪರೀಕ್ಷೆಗಳಲ್ಲಿ ಭಾಗವಹಿಸಲು ಸುಲಭವಾಗಲಿದೆ. ಪ್ರಾಥಮಿಕ ಪರೀಕ್ಷೆಗೆ 100 ರೂ. ಶುಲ್ಕವು ಎಲ್ಲಾ ವಿಭಾಗಗಳಿಗೆ ಏಕರೂಪವಾಗಿರುತ್ತದೆ. ಆದರೆ, ಮುಖ್ಯ ಪರೀಕ್ಷೆಗೆ ಶುಲ್ಕವಿಲ್ಲದಿರುವುದು ಅಭ್ಯರ್ಥಿಗಳಿಗೆ ಹೆಚ್ಚಿನ ಅವಕಾಶವನ್ನು ಒದಗಿಸಲಿದೆ.

ಬಿಹಾರದ ಯುವಕರಿಗೆ ಸರ್ಕಾರಿ ಉದ್ಯೋಗಗಳನ್ನು ನೀಡುವುದು ತಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ. ರಾಜ್ಯದ ಯುವಕರಿಗೆ ಅವಕಾಶಗಳನ್ನು ಒದಗಿಸಲು ಮತ್ತು ಅವರ ಭವಿಷ್ಯವನ್ನು ಸುರಕ್ಷಿತಗೊಳಿಸಲು ನಮ್ಮ ಸರ್ಕಾರ ಹಲವಾರು ದೃಢವಾದ ಕ್ರಮಗಳನ್ನು ತೆಗೆದುಕೊಂಡಿದೆ. ಈಗ, ನಾವು ಯುವಕರ ಹಿತದೃಷ್ಟಿಯಿಂದ ಈ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ ಎಂದು ಸಿಎಂ ನಿತೀಶ್ ಕುಮಾರ್ ಎಕ್ಸ್ ಖಾತೆಯಲ್ಲಿ ಹೇಳಿದ್ದಾರೆ.

Leave a Reply

Your email address will not be published. Required fields are marked *

error: Content is protected !!