ಉದಯವಾಹಿನಿ, ನವದೆಹಲಿ: ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗಿರುವ ಸಿಪಿ ರಾಧಾಕೃಷ್ಣನ್‌ಗೆ ಮೈತ್ರಿ ಪಕ್ಷ ಜೆಡಿಎಸ್ ಬೆಂಬಲ ಘೋಷಿಸಿದೆ. ದೆಹಲಿಯ ದೇವೇಗೌಡರ ನಿವಾಸದಲ್ಲಿ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ದೇವೇಗೌಡರನ್ನ ಭೇಟಿಯಾಗಿ ಚರ್ಚೆ ನಡೆಸಿದರು.
ಭೇಟಿಯ ಸಮಯದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ ಜೋಶಿ, ಕುಮಾರಸ್ವಾಮಿ, ಸಂಸದರಾದ ಮಂಜುನಾಥ್ ಉಪಸ್ಥಿತರಿದ್ದರು. ಇದೇ ವೇಳೆ ಮಾತನಾಡಿದ ದೇವೇಗೌಡರು, ನನ್ನ 10 ವರ್ಷದ ಅನುಭವದಲ್ಲಿ ಮೋದಿ ಅವರ ಮನಸ್ಸನ್ನು ಯಾರು ಪತ್ತೆ ಹಚ್ಚಲು ಸಾಧ್ಯವಿಲ್ಲ. ಕೊನೆಯ ಘಳಿಗೆಯ ತನಕ ಗುಟ್ಟು ಬಿಟ್ಟು ಕೊಡುವುದಿಲ್ಲ. ರಾಧಾಕೃಷ್ಣನ್ ಅವರು ಅಂತಿಮವಾಗಿ ಆಯ್ಕೆಯಾದರು. ಎಲ್ಲಾ ದೃಷ್ಟಿಯಿಂದಲೂ ಸಮರ್ಥರು, ಅರ್ಹರು ಆಗಿರುವ ಯೋಗ್ಯ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದಾರೆ ಎಂದರು.

ರಾಜ್ಯಪಾಲರಾಗಿ, ಲೆಫ್ಟಿನೆಂಟ್ ಗವರ್ನರ್ ಆಗಿ, ಲೋಕಸಭಾದ ಹಲವು ಸಮಿತಿಗಳಲ್ಲಿ ಕೆಲಸ ಮಾಡಿದ್ದಾರೆ. ವಿವಿಧ ಸಮಿತಿಗಳ ಭಾಗವಾಗಿ 24 ದೇಶಗಳಲ್ಲಿ ಪ್ರವಾಸ ಮಾಡಿದ್ದಾರೆ. ಜನಸಾಮಾನ್ಯರ ಮಧ್ಯದಿಂದ ಬೆಳದು ಬಂದ ವ್ಯಕ್ತಿ ಇವರು, ನನಗೆ ತುಂಬಾ ಸಂತೋಷ ಆಗಿದೆ. ನಾನು ಒಬ್ಬ ಸಾಮಾನ್ಯ ಸದಸ್ಯನಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ನಮ್ಮ ಪಕ್ಷದಿಂದ ಬೆಂಬಲ ಇದೆ ಎಂದು ದೇವೇಗೌಡರು ಹೇಳಿದರು.

 

Leave a Reply

Your email address will not be published. Required fields are marked *

error: Content is protected !!