ಉದಯವಾಹಿನಿ, ಜೈಪುರ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಹಿಳೆಯೊಬ್ಬರಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ರಾಜಸ್ಥಾನದ ಉದಯಪುರದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ನ್ಯಾಯಾಲಯವು ಆದೇಶ ಹೊರಡಿಸಿದೆ.ಉದಯಪುರದಲ್ಲಿ ಪೋಕ್ಸೋ ಕಾಯ್ದೆಯಡಿ ಮಹಿಳಾ ಆರೋಪಿಗೆ ಶಿಕ್ಷೆ ವಿಧಿಸಲಾದ ಮೊದಲ ಪ್ರಕರಣ ಇದಾಗಿದೆ. ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಮಹೇಂದ್ರ ಓಜಾ ಮಾತನಾಡಿ, ಈ ಘಟನೆ 2023 ರಲ್ಲಿ ನಡೆದಿದ್ದು, ಆಗ 17 ವರ್ಷ ವಯಸ್ಸಿನ ಅಪ್ರಾಪ್ತ ಬಾಲಕ ಮನೆಯಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ. ಆತನ ತಂದೆ ಪ್ರತಾಪ್ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು. ಪೊಲೀಸರು ಬಾಲಕನನ್ನು ಪತ್ತೆಹಚ್ಚಿ ಕುಟುಂಬಕ್ಕೆ ಹಸ್ತಾಂತರಿಸಿದ್ದಾರೆ.
ಮಹಿಳೆಯೊಬ್ಬರು ನನ್ನ ಮಗನನ್ನು ಜೊತೆಯಲ್ಲಿ ಇಟ್ಟುಕೊಂಡಿದ್ದರು. ಬೇರೆ ಬೇರೆ ಸ್ಥಳಗಳಿಗೆ ಕರೆದೊಯ್ದು, ಅವನ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾಳೆ ಎಂದು ಬಾಲಕನ ತಂದೆ ದೂರಿನಲ್ಲಿ ತಿಳಿಸಿದ್ದರು.

Leave a Reply

Your email address will not be published. Required fields are marked *

error: Content is protected !!