ಉದಯವಾಹಿನಿ, ಉಡುಪಿ: ಸ್ನೇಹಿತೆಯರ ಜೊತೆ ಧರ್ಮಸ್ಥಳಕ್ಕೆ ಹೋಗಿದ್ದ ನನ್ನ ಮಗಳು ಕಾಣೆಯಾಗಿದ್ದಾಳೆ ಎಂದು ಹೇಳಿಕೆ ನೀಡಿ ಸಂಚಲನ ಮೂಡಿಸಿದ್ದ ಸುಜಾತ ಭಟ್ ವಿಚಾರದಲ್ಲಿ ಈಗ ಒಂದೊಂದೇ ಸತ್ಯಗಳು ಹೊರ ಬರುತ್ತಿವೆ. ಈಗ 9ನೇ ತರಗತಿ ಇದ್ದಾಗಲೇ ಸುಜಾತ ಭಟ್ ಆರೇಳು ತಿಂಗಳ ಬಸುರಿ ಆಗಿದ್ದ ವಿಚಾರ ಬೆಳಕಿಗೆ ಬಂದಿದೆ.
ಅನನ್ಯಾ ಭಟ್ ಫೋಟೋವನ್ನು ಸುಜಾತಾ ಭಟ್ ರಿಲೀಸ್ ಮಾಡುತ್ತಿದ್ದಂತೆ ಸಾಕಷ್ಟು ಹಲ್‌ಚಲ್ ಎದ್ದಿದೆ. ಯಾರದ್ದೋ ಮನೆಯ ಸೊಸೆ ಫೋಟೋ ತೋರಿಸಿ ತಮ್ಮ ಮಗಳು ಎನ್ನುತ್ತಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ವಸಂತಾ ಎಂಬುವವರ ಸಹೋದರ ನನ್ನ ತಂಗಿ ಫೋಟೋ ಬಳಸಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದರು. ಇದೀಗ ಸ್ವತಃ ಸುಜಾತ ಭಟ್ ಸಹೋದರನೇ ಪಬ್ಲಿಕ್ ಟಿವಿಗೆ ಪ್ರತಿಕ್ರಿಸಿದ್ದು, ಆಕೆಗೆ ಮಗಳು ಇರಲು ಸಾಧ್ಯವೇ ಇಲ್ಲ ಎಂದಿದ್ದಾರೆ. ಸಹೋದರ ತಮ್ಮ ಹೆಸರು ಹಾಗೂ ಮುಖವನ್ನು ಬಹಿರಂಗಪಡಿಸಬಾರದು ಎಂದು ಮಾಧ್ಯಮಗಳಿಗೆ ಷರತ್ತು ವಿಧಿಸಿ ಹೇಳಿಕೆ ನೀಡಿದ್ದರಿಂದ ಅವರ ಹೆಸರನ್ನು ಇಲ್ಲಿ ಪ್ರಕಟಿಸುತ್ತಿಲ್ಲ. ಸುಜಾತ ಭಟ್ ಒಂಬತ್ತನೇ ತರಗತಿ ಓದುತ್ತಿದ್ದಾಗಲೇ ಮನೆಯಿಂದ ಓಡಿ ಹೋಗಿದ್ದಳು. ಏಳೆಂಟು ತಿಂಗಳ ಬಸುರಿಯಾದ ವಿಚಾರ ಗೊತ್ತಾದ ನಂತರ ನನ್ನ ತಂದೆ ಕ್ಲಿನಿಕ್‌ನಲ್ಲಿ ಅಬಾರ್ಷನ್ ಮಾಡಿಸಿದ್ದರು. ನಮ್ಮ ಕುಟುಂಬದೊಂದಿಗೆ ಆಕೆ ಸಂಪರ್ಕದಲ್ಲಿ ಇಲ್ಲ. ಕೆಲ ವರ್ಷದ ಹಿಂದೆ ಬಂದಾಗ ಶಿವಮೊಗ್ಗದ ರಿಪ್ಪನ್ ಪೇಟೆಯಲ್ಲಿ ಯಾರದ್ದೋ ಜೊತೆಗೆ ಇದ್ದೇನೆ. ನಂತರ ಶಿವಮೊಗ್ಗದಿಂದ ಬೆಂಗಳೂರಿನಲ್ಲಿ ಈಗ ನೆಲೆಸಿದ್ದೇನೆ ಎಂದು ಹೇಳಿದ್ದಳು.
