
ಉದಯವಾಹಿನಿ, ಬೆಂಗಳೂರು: ಚಿನ್ನಸ್ವಾಮಿ ಕಾಲ್ತುಳಿತದಿಂದ ತುಂಬಾ ಡಿಸ್ಟರ್ಬ್ ಆಗಿದ್ದೇನೆ, ನನ್ನ ರಾಜಕೀಯ ಬದುಕಿನಲ್ಲೇ ಬಹಳ ದು:ಖ ಕೊಟ್ಟಂತಹ ಘಟನೆಯಿದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾವುಕರಾದರು. ಮುಂಗಾರು ಅಧಿವೇಶನದ ಕೊನೆಯ ದಿನವಾದ ಶುಕ್ರವಾರ ವಿಧಾನಸಭೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತ ಪ್ರಕರಣ ಪ್ರತಿಧ್ವನಿಸಿತು. ಈ ಬಗ್ಗೆ ನಡೆದ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಅವರು ಉತ್ತರಿಸಿ, ಪ್ರಕರಣದಲ್ಲಿ ಸರ್ಕಾರದ ಪಾತ್ರ ಇಲ್ಲ, ಇದಕ್ಕೆ ಸರ್ಕಾರ ಕಾರಣ ಅಲ್ಲ, ಯಾರೂ ರಾಜೀನಾಮೆ ಕೊಡಲ್ಲ. ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ ಎಂದು ಸ್ಪಷ್ಟನೆ ಕೊಟ್ಟರು.ಬಿಜೆಪಿಯವರ (BJP) ಸಾರ್ವಜನಿಕ ಕ್ಷಮಾಪಣೆಯ ಆಗ್ರಹ ತಳ್ಳಿಹಾಕಿದ ಸಿಎಂ ಸದನದಲ್ಲಿ ಮತ್ತೊಮ್ಮೆ ಘಟನೆಗೆ ವಿಷಾದ ವ್ಯಕ್ತಪಡಿಸಿದರು.
