ಉದಯವಾಹಿನಿ, ಬಳ್ಳಾರಿ: ತುಂಗಭದ್ರಾ ಜಲಾಶಯದ ಹೊರ ಹರಿವು ಇಳಿಕೆಯಾದ ಹಿನ್ನೆಲೆಯಲ್ಲಿ ಸಂಚಾರಕ್ಕೆ ಕಂಪ್ಲಿ ಸೇತುವೆಯನ್ನು ತೆರೆಯಲಾಗಿದೆ.
ತುಂಗಭದ್ರಾ ಜಲಾಶಯದಿಂದ ಒಂದು ಲಕ್ಷ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಿದ್ದರಿಂದ ಕಂಪ್ಲಿ ಸೇತುವೆ ಜಲಾವೃತವಾಗಿತ್ತು. ನಿನ್ನೆ ಸಂಜೆಯಿಂದ ನದಿಗೆ ಹೊರಹರಿವು ಕಡಿಮೆ ಮಾಡಿದ್ದರಿಂದ ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ.
ತುಂಗಭದ್ರಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಈ ಸೇತುವೆ ಬಳ್ಳಾರಿ-ಗಂಗಾವತಿ (Ballari-Gangavathi) ಪಟ್ಟಣಗಳಿಗೆ ಸಂಪರ್ಕ ಕಲ್ಪಿಸುತ್ತದೆ.
