ಉದಯವಾಹಿನಿ, ನವದೆಹಲಿ: ಟ್ರಂಪ್ ಸುಂಕ ಕ್ರಮಗಳ ನಂತರ ಆಗಸ್ಟ್ 25 ರಿಂದ ಭಾರತ, ಅಮೆರಿಕಕ್ಕೆ (America) ಅಂಚೆ ಸೇವೆಗಳನ್ನು ಸ್ಥಗಿತಗೊಳಿಸಲಿದೆ. ಈ ತಿಂಗಳ ಕೊನೆಯಲ್ಲಿ ಜಾರಿಗೆ ಬರಲಿರುವ ಯುಎಸ್ ಕಸ್ಟಮ್ಸ್ ನಿಯಮಗಳಲ್ಲಿನ ಬದಲಾವಣೆಗಳನ್ನು ಉಲ್ಲೇಖಿಸಿ, ಆ.25 ರಿಂದ ಅಮೆರಿಕಕ್ಕೆ ಎಲ್ಲಾ ಅಂಚೆ ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವುದಾಗಿ ಅಂಚೆ ಇಲಾಖೆ ಶನಿವಾರ ಪ್ರಕಟಿಸಿದೆ.ಈ ನಿರ್ಧಾರವು ಜು.30 ರಂದು US ಆಡಳಿತವು ಹೊರಡಿಸಿದ ಕಾರ್ಯನಿರ್ವಾಹಕ ಆದೇಶ ಸಂಖ್ಯೆ 14324 ಅನ್ನು ಅನುಸರಿಸುತ್ತದೆ. ಇದು 800 ಡಾಲರ್ ವರೆಗಿನ ಸರಕುಗಳಿಗೆ ಸುಂಕ-ಮುಕ್ತ ಡಿ ಮಿನಿಮಿಸ್ ವಿನಾಯಿತಿಯನ್ನು ಹಿಂತೆಗೆದುಕೊಳ್ಳುತ್ತದೆ.‌
ವ್ಯಾಪಾರ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅಂಚೆ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ಭಾರತದ ಮೇಲೆ ಶೇ. 25 ರಷ್ಟು ಸುಂಕವನ್ನು ವಿಧಿಸಿದ್ದರು. ರಷ್ಯಾದ ತೈಲವನ್ನು ಖರೀದಿಸಿದ್ದಕ್ಕಾಗಿ ಹೆಚ್ಚುವರಿಯಾಗಿ ಶೇ. 25 ರಷ್ಟು ಸುಂಕ ಹೇರಿದರು. ಒಟ್ಟು ಸುಂಕದ ಹೊರೆ ಶೇ.50 ಕ್ಕೆ ಹೆಚ್ಚಳವಾಯಿತು.

Leave a Reply

Your email address will not be published. Required fields are marked *

error: Content is protected !!