ಉದಯವಾಹಿನಿ, ಪಾಟ್ನಾ: ಬಂಧನದ ಬಳಿಕ ಸರ್ಕಾರಿ ಉದ್ಯೋಗಿಗಳು ಕೆಲಸ ಕಳೆದುಕೊಳ್ತಾರೆ, ಪ್ರಧಾನಿ, ಸಿಎಂಗೆ ಯಾಕೆ ಹೀಗಾಗಬಾರದು? ಎಂದು ಕ್ರಿಮಿನಲ್ ಕಾನೂನಿನ ವಿಚಾರದ ಕುರಿತು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಬೋಧ್‌ಗಯಾದ ಮಗಧ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ 13 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ವೆಚ್ಚದ ರೈಲು, ರಸ್ತೆ, ವಿದ್ಯುತ್, ವಸತಿ, ನೀರು ಸರಬರಾಜು ಮತ್ತು ಆರೋಗ್ಯ ಕ್ಷೇತ್ರಗಳಿಗೆ ಸಂಬಂಧಿಸಿದ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.
ರ‍್ಯಾಲಿಯಲ್ಲಿ ಮಾತಾಡಿದ ಅವರು, ಬಿಹಾರ ಚಂದ್ರಗುಪ್ತ ಮೌರ್ಯ ಮತ್ತು ಚಾಣಕ್ಯನ ನಾಡು. ಈ ನೆಲದಲ್ಲಿ ತೆಗೆದುಕೊಂಡ ಪ್ರತಿಯೊಂದು ನಿರ್ಣಯವೂ ಎಂದಿಗೂ ವ್ಯರ್ಥವಾಗುವುದಿಲ್ಲ. ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಾಗ ಬಿಹಾರದ ಈ ನೆಲದಿಂದ ನಿಂತು ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವ ಬಗ್ಗೆ ಮಾತನಾಡಿದ್ದೆ. ಅಂದು ಬಿಹಾರದ ನೆಲದಿಂದ ತೆಗೆದುಕೊಂಡ ನಿರ್ಣಯವು ಈಡೇರಿದೆ ಎಂದು ಜಗತ್ತು ನೋಡುತ್ತಿದೆ ಎಂದು ಹೇಳಿದರು.
