ಉದಯವಾಹಿನಿ, ವಾಷಿಂಗ್ಟನ್: ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಪ್ತ ರಾಜಕೀಯ ಸಹಾಯಕ ಮತ್ತು ಶ್ವೇತಭವನದ ಪ್ರಮುಖ ಅಧಿಕಾರಿಯಾದ ಸೆರ್ಗಿಯೊ ಗೋರ್ ಅವರನ್ನು ಅಮೆರಿಕಾದ ಭಾರತೀಯ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.ಭಾರತದೊಂದಿಗೆ ಅಮೆರಿಕ ಸಂಬಂಧ ಸೂಕ್ಷ್ಮ ಹಂತದಲ್ಲಿರುವಾಗ ಟ್ರಂಪ್ ತಮ್ಮ ಅತ್ಯಂತ ನಂಬಿಕಸ್ಥ ಅಧಿಕಾರಿಯನ್ನು ಈ ಹುದ್ದೆಗೆ ಆಯ್ಕೆ ಮಾಡಿದ್ದಾರೆ. ಗೋರ್ ಅವರನ್ನು ಭಾರತ ರಾಯಭಾರಿ ಮಾತ್ರವಲ್ಲದೇ ದಕ್ಷಿಣ ಮತ್ತು ಮಧ್ಯ ಏಷ್ಯಾಕ್ಕೆ ವಿಶೇಷ ರಾಯಭಾರಿಯಾಗಿಯೂ ಟ್ರಂಪ್ ನೇಮಿಸಿದ್ದಾರೆ.
ಈ ಕುರಿತು ತಮ್ಮ ಟ್ರೂತ್ ಸೋಶಿಯಲ್ ವೇದಿಕೆಯಲ್ಲಿ ಪೋಸ್ಟ್ ಮಾಡಿರುವ ಡೊನಾಲ್ಡ್ ಟ್ರಂಪ್, ವಿಶ್ವದ ಅತ್ಯಂತ ಜನನಿಬಿಡ ಪ್ರದೇಶದಲ್ಲಿ ನನ್ನ ಕಾರ್ಯಸೂಚಿಯನ್ನು ಜಾರಿಗೊಳಿಸಲು ಮತ್ತು ಅಮೆರಿಕವನ್ನು ಮತ್ತೆ ಶ್ರೇಷ್ಠವಾಗಿಸಲು ನಾನು ಸಂಪೂರ್ಣವಾಗಿ ವಿಶ್ವಾಸ ಇಡಬಹುದಾದ ವ್ಯಕ್ತಿ ಇರುವುದು ಮುಖ್ಯ. ಆದ್ದರಿಂದ ಸೆರ್ಗಿಯೊ ಗೋರ್ ಅವರನ್ನು ಭಾರತದ ರಾಯಭಾರಿಯಾಗಿ ನೇಮಿಸುತ್ತಿದ್ದು, ಗೋರ್ ಅವರನ್ನು ಭಾರತ ಗಣರಾಜ್ಯಕ್ಕೆ ನಮ್ಮ ಮುಂದಿನ ಅಮೆರಿಕದ ರಾಯಭಾರಿಯಾಗಿ ಬಡ್ತಿ ನೀಡುತ್ತಿದ್ದೇನೆ ಎಂದು ಘೋಷಿಸಲು ನನಗೆ ಸಂತೋಷವಾಗುತ್ತಿದೆ. ಅವರು ದಕ್ಷಿಣ ಮತ್ತು ಮಧ್ಯ ಏಷ್ಯಾ ವ್ಯವಹಾರಗಳಿಗೆ ವಿಶೇಷ ರಾಯಭಾರಿಯಾಗಿಯೂ ಸೇವೆ ಸಲ್ಲಿಸಲಿದ್ದಾರೆ.

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರಕ್ಕೆ ಅವರನ್ನು ನೇಮಕ ಮಾಡಲಾಗಿದೆ. ನನ್ನ ಕಾರ್ಯಸೂಚಿಯನ್ನು ಪೂರೈಸಲು ಮತ್ತು ಅಮೆರಿಕವನ್ನು ಮತ್ತೆ ಶ್ರೇಷ್ಠವಾಗಿಸಲು ನಮಗೆ ಸಹಾಯ ಮಾಡಲು ನಾನು ಸಂಪೂರ್ಣವಾಗಿ ನಂಬಬಹುದಾದ ವ್ಯಕ್ತಿಯನ್ನು ಹೊಂದಿರುವುದು ಮುಖ್ಯ. ಸೆರ್ಗಿಯೊ ಅದ್ಭುತ ರಾಯಭಾರಿಯಾಗುತ್ತಾರೆ. ಅಭಿನಂದನೆಗಳು ಸೆರ್ಗಿಯೊ ಎಂದು ಬರೆದುಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!