ಉದಯವಾಹಿನಿ, ಮುಂಬೈ: 2025ರ ಟಿ20 ಏಷ್ಯಾಕಪ್ ಟೂರ್ನಿಗೆ ಇನ್ನೂ ಕೆಲ ದಿನಗಳು ಬಾಕಿಯಿರುವಾಗಲೇ ಟೀಂ ಇಂಡಿಯಾ ಬಿಗ್ ಶಾಕ್ ಎದುರಾಗಿದೆ. ಈಗಾಗಲೇ ಏಷ್ಯಾಕಪ್ ತಂಡದಲ್ಲಿ ಸ್ಥಾನ ಪಡೆದಿರುವ ಉಪನಾಯಕ ಶುಭಮನ್ ಗಿಲ್ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.
ಮುಂದಿನ ಸೆ.9 ರಿಂದ ಸೆ.28ರ ವರೆಗೆ ಯುಎಇನಲ್ಲಿ ಟಿ20 ಏಷ್ಯಾಕಪ್ ) ಟೂರ್ನಿ ನಡೆಯಲಿದೆ. ಅನಾರೋಗ್ಯದಿಂದ ಬಳಲುತ್ತಿರುವ ಗಿಲ್, ಪ್ರಸ್ತುತ ಚಂಡೀಗಢದಲ್ಲಿರುವ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಫಿಸಿಕಲ್ ಫಿಟ್ನೆಸ್ ತಜ್ಞರು ಹೇಳುವಂತೆ ಗಿಲ್ ಅವರು ಏಷ್ಯಾಕಪ್ ಟೂರ್ನಿಗೆ ಫಿಟ್ ಆಗುವ ನಿರೀಕ್ಷೆಯಿದೆ. ಆದ್ರೆ ಇದೇ ಆಗಸ್ಟ್ 28ರಿಂದ ಸೆ.15ರ ವರೆಗೆ ನಡೆಯಲಿರುವ ಪ್ರತಿಷ್ಠಿತ ದುಲೀಪ್ ಟ್ರೋಫಿಯಿಂದ ಹೊರಗುಳಿಯುವ ಸಾಧ್ಯತೆಗಳಿಗೆ ಎಂದು ವರದಿಯಾಗಿದೆ.
ಏಷ್ಯಾಕಪ್‌ಗೆ ಭಾರತ ತಂಡ ಹೀಗಿದೆ..?
ಸೂರ್ಯಕುಮಾರ್ ಯಾದವ್ (ನಾಯಕ), ಶುಭಮನ್ ಗಿಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ, ರಿಂಕು ಸಿಂಗ್.
