ಉದಯವಾಹಿನಿ, ಕೋಲ್ಕತ್ತಾ: ಭಾರತವು ಈಗ ವಿಶ್ವದ ಮೂರನೇ ಅತಿದೊಡ್ಡ ಮೆಟ್ರೋ ಜಾಲವನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅವರು ಕೋಲ್ಕತ್ತಾದಲ್ಲಿ ಬಹು ಮೆಟ್ರೋ ರೈಲು ಯೋಜನೆಗಳನ್ನು ಉದ್ಘಾಟಿಸಿದರು ಮಾತನಾಡಿದರು. ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗುವತ್ತ ಸಾಗುತ್ತಿರುವಂತೆ ಸರ್ಕಾರವು ಪ್ರತಿಯೊಂದು ನಗರದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ ಎಂದು ಈ ಯೋಜನೆಗಳು ತೋರಿಸಿವೆ ಎಂದು ಅವರು ತಿಳಿಸಿದರು.
ಬಹು ಮೆಟ್ರೋ ರೈಲು ಯೋಜನೆ ಉದ್ಘಾಟನೆ ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರಾಭಿವೃದ್ಧಿ ಮತ್ತು ಹಸುರೀಕರಣಕ್ಕೆ ಸರ್ಕಾರದ ಬದ್ಧತೆಯನ್ನು ಈ ಯೋಜನೆಗಳು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು. ಭಾರತವು ಇಂದು ಮೂರನೇ ಅತಿದೊಡ್ಡ ಆರ್ಥಿಕತೆಯಾಗುವತ್ತ ಸಾಗುತ್ತಿದೆ. ಇದರಲ್ಲಿ ಕೋಲ್ಕತ್ತಾದ ಪಾತ್ರವು ಮತ್ತಷ್ಟು ಹೆಚ್ಚಾಗಿದೆ. ಭಾರತವು ಪ್ರತಿಯೊಂದು ನಗರದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿಯಾಗಿದೆ. ಪ್ರತಿಯೊಂದು ನಗರದಲ್ಲಿಯೂ ಹಸಿರು ಚಲನಶೀಲತೆಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ವಿದ್ಯುತ್ ಚಾರ್ಜಿಂಗ್ ಪಾಯಿಂಟ್‌ಗಳು ಮತ್ತು ಎಲೆಕ್ಟ್ರಿಕ್ ಬಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ. ಮೆಟ್ರೋ ಜಾಲವನ್ನು ವಿಸ್ತರಿಸಲಾಗುತ್ತಿದೆ ಎಂದರು. ಪಶ್ಚಿಮ ಬಂಗಾಳದಲ್ಲಿ ಮತ್ತೊಮ್ಮೆ ಅಭಿವೃದ್ಧಿಯನ್ನು ವೇಗಗೊಳಿಸಲು ನನಗೆ ಅವಕಾಶ ಸಿಕ್ಕಿದೆ. ಕೋಲ್ಕತ್ತಾದ ಸಾರ್ವಜನಿಕ ಸಾರಿಗೆ ಪ್ರಗತಿ ಸಾಧಿಸಿರುವುದಕ್ಕೆ ಎಲ್ಲರೂ ಸಂತೋಷವಾಗಿದ್ದಾರೆ. ಈ ಅಭಿವೃದ್ಧಿ ಯೋಜನೆಗಳಿಗಾಗಿ ಕೋಲ್ಕತ್ತಾದ ಜನರನ್ನು ನಾನು ಅಭಿನಂದಿಸುತ್ತೇನೆ ಎಂದರು. ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಂದ್ರ ಸಚಿವರಾದ ರವನೀತ್ ಸಿಂಗ್ ಮತ್ತು ಶಾಂತನು ಠಾಕೂರ್ ಅವರು ಸಮ್ಮಾನಿಸಿದರು.

Leave a Reply

Your email address will not be published. Required fields are marked *

error: Content is protected !!