ಉದಯವಾಹಿನಿ,ಶಿಕಾರಿಪುರ: ‘ತುರ್ತು ಪರಿಸ್ಥಿತಿ ವಿರುದ್ಧ ಹೋರಾಡಿದ ದೇಶದ ಜನ ಹಾಗೂ ಹೋರಾಟಗಾರರನ್ನು ನಾವು ಸ್ಮರಿಸಬೇಕು’ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು. ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ತುರ್ತು ಪರಿಸ್ಥಿತಿ ಕರಾಳ ನೆನಪು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಅಂದಿನ ಪ್ರಧಾನಿ ಇಂದಿರಾಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ ತುರ್ತು ಪರಿಸ್ಥಿತಿ ಹೇರುವ ಮೂಲಕ ಸರ್ವಾಧಿಕಾರಿ ಧೋರಣೆ ತೋರಿತ್ತು. ದೇಶದ ಜನರ ಹಕ್ಕನ್ನು ಕಸಿದಿತ್ತು. ಪತ್ರಿಕಾ ಸ್ವಾತಂತ್ರ್ಯವನ್ನು ಹರಣ ಮಾಡಿತ್ತು. ತುರ್ತು ಪರಿಸ್ಥಿತಿ ಹೇರಿಕೆ ಖಂಡಿಸಿ ದೇಶದ ಜನ ಹಾಗೂ ಮುಖಂಡರು ಹೋರಾಟ ನಡೆಸಿ ಜೈಲು ಸೇರಿದ್ದರು ಎಂದು ಸ್ಮರಿಸಿದರು. ಬಿಜೆಪಿ ತಾಲ್ಲೂಕು ಅಧ್ಯಕ್ಷ ವೀರೇಂದ್ರ ಪಾಟೀಲ್, ಮುಖಂಡರಾದ ಕೊಳಗಿ ರೇವಣಪ್ಪ, ರಾಘಣ್ಣ, ಎಂ.ಬಿ. ಚನ್ನವೀರಪ್ಪ, ತೊಗರ್ಸಿ ಸಣ್ಣ ಹನುಮಂತಪ್ಪ, ಗಾಯತ್ರಿದೇವಿ, ನಿಂಬೆಗೊಂದಿ ಸಿದ್ದಲಿಂಗಪ್ಪ ಉಪಸ್ಥಿತರಿದ್ದರು.
