ಉದಯವಾಹಿನಿ, ಬೆಂಗಳೂರು: ಅನಧಿಕೃತ ಪಾರ್ಕಿಂಗ್ ಮಾಡಿ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಮಾಡುತ್ತಿದ್ದ 12,097 ವಾಹನ ಸವಾರರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗಿದೆ.ನಗರ ಸಂಚಾರಿ ಪೊಲೀಸರು ಪಾರ್ಕಿಂಗ್ ನಿಯಮಗಳ ಉಲ್ಲಂಘನೆಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಆ.18 ರಿಂದ 24ರ ವರೆಗೆ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು.
ಅನಧಿಕೃತವಾಗಿ ಪಾರ್ಕಿಂಗ್ ಮಾಡಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ತೊಂದರೆ ಉಂಟು ಮಾಡುತ್ತಿದ್ದ ವಾಹನ ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ದಿನಗಳಲ್ಲಿಯೂ ಈ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
