ಉದಯವಾಹಿನಿ, ಸಾಂಗ್ಲಿ:  ಭಾರತದ ದೀನದಲಿತರ ಹಾಗೂ ಬಡವರ ಏಳಿಗೆಗಾಗಿ, ಭ್ರಷ್ಟಾಚಾರ ನಿಗ್ರಹಕ್ಕಾಗಿ ಹಾಗೂ ದೇಶವನ್ನು ಅಭಿವೃದ್ಧಿಯ ಪಥದಲ್ಲಿ ನಡೆಸುವ ಸಲುವಾಗಿ ಭಾರತದಲ್ಲಿ ಬಿಜೆಪಿಯೇತರ ಸರ್ಕಾರ ಬರಲೇಬೇಕು ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ಅವರು ಭಾನುವಾರ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಮಹಾ ನಿರ್ಧಾರ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲೋಕಸಭೆಯಲ್ಲಿ ಎಲ್ಲರೂ ಒಗ್ಗಟ್ಟದಾಗಿ , ಸ್ವಾತಂತ್ರ್ಯ ಹೋರಾಟದಲ್ಲಿ ಹೋರಾಡಿದಂತೆ, ಬಿಜೆಪಿಯನ್ನು ಹೋಗಲಾಡಿಸಲು ಕಾಂಗ್ರೆಸ್ ಕಾರ್ಯಕರ್ತರು ಪಕ್ಷವನ್ನು ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಬೇಕು ಎಂದು ಅವರು ಕರೆ ನೀಡಿದರು.

40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಮೋದಿಯಂತಹ ಸುಳ್ಳು ಹೇಳುವ ಪ್ರಧಾನಿಯನ್ನು ನಾನು ನೋಡಿರಲಿಲ್ಲ. ಚುನಾವಣೆಯ ಸಂದರ್ಭದಲ್ಲಿ ವಿದೇಶದಲ್ಲಿ ಕಪ್ಪುಹಣವನ್ನು ತಂದು, ದೇಶದ ಪ್ರತಿಯೊಬ್ಬರಿಗೂ 15 ಲಕ್ಷ ನೀಡುತ್ತೇವೆಂಬ ಅವರ ಮಾತು ಸುಳ್ಳಾಯಿತು. 9 ವರ್ಷದಲ್ಲಿ 18 ಕೋಟಿ ಉದ್ಯೋಗ ಸೃಷ್ಟಿಸಬೇಕು. ಹೊಸ ಉದ್ಯೋಗ ಸೃಷ್ಟಿಸುವ ಬದಲು ಇರುವ ಉದ್ಯೋಗವನ್ನು ಯುವಕರು ಕಳೆದುಕೊಳ್ಳುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!