ಉದಯವಾಹಿನಿ, ಅಮರನ್ ಸೂಪರ್ ಸಕ್ಸಸ್ ಬಳಿಕ ಶಿವಕಾರ್ತಿಕೇಯನ್ ನಟಿಸುತ್ತಿರುವ ಬಹು ನಿರೀಕ್ಷಿತ ಸಿನಿಮಾ ಮದರಾಸಿ ಎ.ಆರ್ ಮುರುಗದಾಸ್ ನಿರ್ದೇಶನದ ಈ ಚಿತ್ರದ ಟ್ರೈಲರ್‌ ರಿಲೀಸ್ ಆಗಿದೆ.ಆಕ್ಷನ್ ಪ್ಯಾಕ್ಡ್ ಟ್ರೈಲರ್‌ನಲ್ಲಿ ಶಿವಕಾರ್ತಿಕೇಯನ್ ಮಾಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಟ್ರೈಲರ್‌ ಉದ್ದಕ್ಕೂ ಬಂದೂಕು ಮತ್ತು ಸ್ಫೋಟದ ಸದ್ದೇ ಜೋರಾಗಿದೆ. ಕನ್ನಡತಿ ರುಕ್ಮಿಣಿ ವಸಂತ್ ಶಿವಕಾರ್ತಿಕೇಯನ್‌ಗೆ ಜೋಡಿಯಾಗಿ ಸಾಥ್ ಕೊಟ್ಟಿದ್ದಾರೆ.
ಪ್ರೀತಿ ಜೊತೆ ದ್ವೇಷ, ಪ್ರತೀಕಾರದ ಅಂಶಗಳನ್ನು ಬ್ಲೆಂಡ್ ಮಾಡಿ ಟ್ರೈಲರ್‌ ಕಟ್ ಮಾಡಲಾಗಿದೆ. ಕನ್ನಡದಲ್ಲಿಯೂ ಟ್ರೈಲರ್‌ ಬಿಡುಗಡೆಯಾಗಿದೆ. ವಿದ್ಯುತ್ ಜಮ್ವಾಲ್, ಬಿಜು ಮೆನನ್, ಶಬೀರ್ ಕಲ್ಲರಕ್ಕಲ್, ವಿಕ್ರಾಂತ್ ತಾರಾಬಳಗದಲ್ಲಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ಚಿತ್ರಕ್ಕಿದೆ.

Leave a Reply

Your email address will not be published. Required fields are marked *

error: Content is protected !!