ಉದಯವಾಹಿನಿ, ನವದೆಹಲಿ: ಧರ್ಮಸ್ಥಳದ ವಿರುದ್ಧ ಪಿತೂರಿಗೆ ವಿದೇಶಿ ಫಂಡಿಂಗ್‌ ಆರೋಪ ಕೇಳಿಬಂದ ಹಿನ್ನೆಲೆ ಜಾರಿ ನಿರ್ದೇಶನಾಲಯ ತನಿಖೆಗೆ ಎಂಟ್ರಿಯಾಗಿದೆ. ಎರಡು ಎನ್‌ಜಿಓಗಳು ಕಾನೂನನ್ನು ಉಲ್ಲಂಘಿಸಿ ವಿದೇಶಿ ಹಣವನ್ನು ಪಡೆದಿರಬಹುದು ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಇದನ್ನು ಧರ್ಮಸ್ಥಳದ ವಿರುದ್ಧದ ಪಿತೂರಿಗೆ ಬಳಸಿರುವ ಸಾಧ್ಯತೆ ಇದೆ. ಇಡಿ ಅವರ ಹಣಕಾಸಿನ ವ್ಯವಹಾರದ ಪರಿಶೀಲನೆ ನಡೆಸುವ ಸಾಧ್ಯತೆ ಇದೆ. ಇಡಿ ಅಧಿಕಾರಿಗಳು ಪೊಲೀಸರಿಂದ ದಾಖಲೆಗಳನ್ನು ಪಡೆದಿದ್ದಾರೆ. ಅಲ್ಲದೇ ವಿದೇಶಿ ಫಂಡ್ ಉಲ್ಲಂಘನೆ ಆರೋಪದ ಮೇಲೆ ಎರಡು ಎನ್‌ಜಿಓಗಳ ಖಾತೆ ವಿವರಗಳು ಮತ್ತು ವಹಿವಾಟಿನ ದಾಖಲೆಗಳ ಬಗ್ಗೆ ಬ್ಯಾಂಕ್‌ಗಳಿಂದ ಮಾಹಿತಿ ಕೇಳಿದೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದ ಎರಡು ದೂರುಗಳ ಆಧಾರದ ಮೇಲೆ ಇಡಿ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎಂದು ಮೂಲಗಳು ತಿಳಿಸಿವೆ.
ವಿಚಾರಣೆಯ ಭಾಗವಾಗಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಮತ್ತು ಇತರ ಬ್ಯಾಂಕ್‌ಗಳಿಗೆ ಪತ್ರ ಬರೆಯಲಾಗಿದೆ. ಅವರ ಪ್ಯಾನ್ ವಿವರಗಳು, ಖಾತೆ ಮಾಹಿತಿ ಮತ್ತು NGO ಗಳಿಗೆ ಸಂಬಂಧಿಸಿದ ಐದು ವರ್ಷಗಳ ವಹಿವಾಟು ದಾಖಲೆಗಳನ್ನು ನೀಡುವಂತೆ ಮನವಿ ಮಾಡಿದೆ. ಸೆ.1 ರಂದು ಧರ್ಮಸ್ಥಳಕ್ಕೆ ಭೇಟಿ ಕೊಟ್ಟಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು, ಕ್ಷೇತ್ರದ ವಿರುದ್ಧ ಪಿತೂರಿಗೆ ವಿದೇಶದಿಂದ ಫಂಡಿಂಗ್‌ ಆಗುತ್ತಿದೆ. ಇದೆಲ್ಲ ಹೊರಗೆ ಬರಬೇಕಾದ್ರೆ ಪ್ರಕರಣವನ್ನ ರಾಜ್ಯ ಸರ್ಕಾರ ಎನ್‍ಐಎ (NIA) ಅಥವಾ ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!