ಉದಯವಾಹಿನಿ, ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಶಂಕಿತ ಉಗ್ರರ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸಿದೆ.ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದು, ಸೋಮವಾರ (ಸೆ.1) ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ ಬಳಿಯ ನಿಯಂತ್ರಣ ರೇಖೆಯಲ್ಲಿ (LOC) ಒಳನುಸುಳಲು ಪ್ರಯತ್ನಿಸುತ್ತಿದ್ದ ಶಂಕಿತ ಉಗ್ರರ ಮೇಲೆ ಭಾರತೀಯ ಸೇನಾಪಡೆ ಗುಂಡಿನ ದಾಳಿ ನಡೆಸಿದೆ ಎಂದು ತಿಳಿಸಿದ್ದಾರೆ.
ಕಳೆದೊಂದು ತಿಂಗಳ ಅವಧಿಯಲ್ಲಿ ಭಾರೀ ಮಳೆಯಿಂದಾಗಿ ಹಠಾತ್ ಪ್ರವಾಹ ಉಂಟಾಗಿ ಜಮ್ಮು ಹಾಗೂ ಕಾಶ್ಮೀರದಲ್ಲಿ ತೀವ್ರ ಹಾನಿಯಾಗಿದೆ. ಈ ಹಿನ್ನೆಲೆ ಪ್ರವಾಹ ಪೀಡಿತ ಪ್ರದೇಶಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah) ಅವರು ಸೋಮವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇದೇ ವೇಳೆ ಉಗ್ರರು ಒಳನುಸುಳಲು ಪ್ರಯತ್ನಿಸಿರುವುದಾಗಿ ತಿಳಿದುಬಂದಿದೆ.
ಸೋಮವಾರ ಬೆಳಿಗ್ಗೆ 5:30ರ ಸುಮಾರಿಗೆ ಬಾಲಕೋಟ್‌ನ ವೈಟ್ ನೈಟ್ ಕಾರ್ಪ್ಸ್‌ ಪಡೆಗಳು ಎಲ್‌ಒಸಿ ಬಳಿ ಅನುಮಾನಾಸ್ಪದ ಚಲನೆಯನ್ನು ಗಮನಿಸಿದರು. ತಕ್ಷಣವೇ ಗುಂಡಿನ ದಾಳಿ ನಡೆಸಿದ್ದಾರೆ. ಬಳಿಕ ಎರಡು ಕಡೆಯಿಂದಲೂ ಗುಂಡಿನ ಚಕಮಕಿ ನಡೆದಿದ್ದು, ಯಾವುದೇ ಸಾವು-ನೋವು ವರದಿಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *

error: Content is protected !!