ಉದಯವಾಹಿನಿ, ಬೆಂಗಳೂರು: ಅಂಜನಾದ್ರಿ ಬೆಟ್ಟ ಸೇರಿ ರಾಜ್ಯದ 11 ಪ್ರವಾಸಿ ತಾಣಗಳಿಗೆ ರೋಪ್ ವೇ ನಿರ್ಮಿಸಲು ಸರ್ಕಾರ ಅನುಮೋದನೆ ನೀಡಿದೆ.
ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಬುಧವಾರ ಮಹತ್ವದ ಸಭೆ ನಡೆಯಿತು. ಈ ವೇಳೆ ಅಂಜನಾದ್ರಿ ಬೆಟ್ಟ ಸೇರಿ ರಾಜ್ಯದ 11 ಪ್ರವಾಸಿ ತಾಣಗಳಿಗೆ ರೋಪ್ ವೇ ನಿರ್ಮಿಸಲು ಸರ್ಕಾರ ಅನುಮೋದನೆ ನೀಡಿದೆ.
ಸಾರ್ವಜನಿಕ ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ರೋಪ್ ವೇಗಳನ್ನು ಅಭಿವೃದ್ಧಿಪಡಿಸಲು ಸರ್ಕಾರದ ಅನುಮೋದನೆ ನೀಡಲಾಗಿರುತ್ತದೆ ಎಂದು ಸಿಎಂ ಕಚೇರಿ ಮಾಧ್ಯಮ ಪ್ರಕಟಣೆ ತಿಳಿಸಿದೆ.
ಅಂಜನಾದ್ರಿ ಬೆಟ್ಟದ ಪ್ರವಾಸೋದ್ಯಮ ಮತ್ತು ಪೌರಾಣಿಕ ಹಾಗೂ ಆಧ್ಯಾತ್ಮಿಕ ಮಹತ್ವವನ್ನು ತಿಳಿಸುವ ರೀತಿಯಲ್ಲಿ ಅಭಿವೃದ್ಧಿಗೊಳಿಸಬೇಕು ಸಿಎಂ ಸೂಚಿಸಿದ್ದಾರೆ. ಅಲ್ಲದೆ ವಯಸ್ಕರು ಬೆಟ್ಟದ ತುದಿಗೆ ತಲುಪಲು ಅಗತ್ಯವಾದ ಸವಲತ್ತುಗಳನ್ನು ಕಲ್ಪಿಸುವುದು ಹಾಗೂ ಇದಕ್ಕಾಗಿ ಪ್ರದಕ್ಷಿಣೆ ಮಾರ್ಗ ನಿರ್ಮಿಸುವ ಬಗ್ಗೆ ಚರ್ಚೆ ನಡೆದಿದೆ.

Leave a Reply

Your email address will not be published. Required fields are marked *

error: Content is protected !!