ಉದಯವಾಹಿನಿ, ಉತ್ತರಾಖಂಡ : ರುದ್ರಪ್ರಯಾಗ ಜಿಲ್ಲೆಯಲ್ಲಿ ಭಾರೀ ಮಳೆಯ ಪರಿಣಾಮ ಕೇದಾರನಾಥ ಯಾತ್ರೆಯನ್ನು ಸೋನ್‌ಪ್ರಯಾಗದಲ್ಲಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಭಾನುವಾರ ಮಾಹಿತಿ ನೀಡಿದ್ದಾರೆ. ರುದ್ರಪ್ರಯಾಗದ ಜಿಲ್ಲಾಧಿಕಾರಿ ಮಯೂರ್ ದೀಕ್ಷಿತ್ ಮಾತನಾಡಿ, ‘ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಕೇದಾರನಾಥವನ್ನು ಮುಂದಿನ ಆದೇಶದವರೆಗೆ ಸ್ಥಗಿತಗೊಳಿಸಲಾಗಿದೆ ‘ ಎಂದು ಹೇಳಿದ್ದಾರೆ. ಏತನ್ಮಧ್ಯೆ, ಹರಿದ್ವಾರದಲ್ಲಿ ಕಳೆದ 24 ಗಂಟೆಗಳಲ್ಲಿ 78 ಮಿಮೀ ಮಳೆಯಾಗಿದ್ದು, ನಂತರ ಡೆಹ್ರಾಡೂನ್ (33.2) ಮತ್ತು ಉತ್ತರಕಾಶಿ (27.7) ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಅಧಿಕಾರಿಗಳಿಗೆ ಸೂಚನೆ ನೀಡಿದ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, ರಾಜ್ಯದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಅತಿವೃಷ್ಟಿ ಮುಂದುವರಿದಿದ್ದು, ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
