ಉದಯವಾಹಿನಿ, ಬೆಂಗಳೂರು: 5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು ಅಂಥ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿಯವರು ರಾಜ್ಯ ಸರ್ಕಾರದ ವಿರುದ್ದ ಕಿಡಿಕಾರಿ ಟ್ವಿಟ್ ಮೇಲೆ ಟ್ವಿಟ್ ಮಾಡಿ ಮುಗಿ ಬಿದಿದ್ದಾರೆ. ಹಾಗಾದ್ರೇ ಅವರು ಟ್ವಿಟ್‌ನಲ್ಲಿ ಹೇಳಿರುವುದು ಏನು ಎನ್ನುವುದನ್ನು ನೋಡುವುದಾದ್ರೆ 5 ಗ್ಯಾರಂಟಿಗಳಿಂದ ಜನೋದ್ಧಾರ ಗ್ಯಾರಂಟಿ ಎಂದು ಹಸಿಸುಳ್ಳು ಹೇಳಿದ್ದ ರಾಜ್ಯ ಕಾಂಗ್ರೆಸ್ ಸರಕಾರ ಬರಗೆಟ್ಟ ಈ ಹೊತ್ತಿನಲ್ಲಿ ಅಂಬರದ ಮೇಲೆ ಕೂತು ಸ್ವಯಂವರ ಮಾಡಿಕೊಳ್ಳುತ್ತಿರುವ ಮತಗೆಟ್ಟ ವರನಂತೆ ವರ್ತಿಸುತ್ತಿದೆ. ಬೆಲೆ ಏರಿಕೆ ಹೊಡೆತಕ್ಕೆ ಜನ ತತ್ತರಿಸುತ್ತಿರುವುದು ಅದರ ಕಣ್ಣಿಗೆ ಕಾಣುತ್ತಿಲ್ಲ ನನಗೂ ಫ್ರೀ, ನಿನಗೂ ಫ್ರೀ ಎಂದು ಗ್ಯಾರಂಟಿ ಜಾಗಟೆ ಹೊಡೆದ ಈ ಸರಕಾರಕ್ಕೆ ಮಾರುಕಟ್ಟೆಯಲ್ಲಿ ಗಗನಮುಖಿಯಾದ ಆಹಾರ ಪದಾರ್ಥಗಳ ಬೆಲೆ ಮೇಲೆ ನಿಯಂತ್ರಣವೇ ಇಲ್ಲ.
ಆಹಾರ ಮತ್ತು ನಾಗರಿಕ ಪೂರೈಕೆ, ಕೃಷಿ ಉತ್ಪನ್ನ ಮಾರುಕಟ್ಟೆ ಇಲಾಖೆಗಳು ಜನರ ಕಣ್ಣೀರಿನಲ್ಲಿ ಗೆಣಸು ಬೇಯಿಸಿಕೊಳ್ಳುತ್ತಿವೆ. ಅವರಿಗೆ ಬೆಲೆ ಇಳಿಕೆ ಬಗ್ಗೆ ಚಿಂತನೆಯೇ ಇಲ್ಲ. ಇನ್ನೊಬ್ಬರ ಮೇಲೆ ಗೂಬೆ ಕೂರಿಸುವ ಈ ಸರಕಾರ ಬಂದು ತಿಂಗಳ ಮೇಲಾಯಿತು. ಅಧಿಕಾರ ಸಿಕ್ಕ ಕೂಡಲೇ ವರ್ಗಾವಣೆ ದಂಧೆಯ ದಾಸ್ಯಕ್ಕೆ ಬಿದ್ದ ಸರಕಾರಕ್ಕೆ ಮಾರುಕಟ್ಟೆಯಲ್ಲಿ ಹೆಚ್ಚುತ್ತಲೇ ಹೋಗುತ್ತಿರುವ ಬೆಲೆಗಳ ಬಗ್ಗೆ, ಆಹಾರ ಪದಾರ್ಥಗಳ ದುಬಾರಿ ಬಗ್ಗೆ ಗಮನ ಹೋಗಲೇ ಇಲ್ಲ. ಹಣದ ಹಪಾಹಪಿ ಭಾಗ್ಯಗಳನ್ನು ಬಲಿ ತೆಗೆದುಕೊಳ್ಳುವ ದುಸ್ಥಿತಿಗೆ ದೂಡಿದೆ.
