ಉದಯವಾಹಿನಿ, ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಅಬಕಾರಿ ಸಚಿವ ಆರ್‌.ಬಿ. ತಿಮಾಪುರ ನಡುವೆ ಜಟಾಪಟಿ ನಡೆದಿದೆ.
ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅನುಷ್ಠಾನಕ್ಕೆ ಸಂಬಂಧಪಟ್ಟಂತೆ ಭೂ ಸ್ವಾಧೀನ, ಪುನರ್‌ ವಸತಿ, ಪುನರ್‌ ನಿರ್ಮಾಣ, ಭೂ ಪರಿಹಾರ, ವಿವಿಧ ನ್ಯಾಯಾಲಯಗಳಲ್ಲಿ ಹೆಚ್ಚುವರಿ ಪರಿಹಾರ ಕೋರಿ ದಾಖಲಿಸಿರುವ ಪ್ರಕರಣಗಳ ಕುರಿತು ಜಲ ಸಂಪನೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕಮಾರ್‌ ಸಭೆ ಕರೆದಿದ್ದರು. ಸಚಿವರಾದ ಪ್ರಿಯಾಂಕ ಖರ್ಗೆ, ಎನ್‌.ಎಸ್‌‍.ಬೋಸ್‌‍ರಾಜ್‌, ಶಿವಾನಂದ ಪಾಟೀಲ್‌, ಆರ್‌.ಬಿ. ತಿಮಾಪುರ್‌, ಶರಣ ಬಸಪ್ಪ ದರ್ಶನಾಪೂರ್‌, ಡಿ.ಸುಧಾಕರ್‌ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.
ಪ್ರತಿ ಎಕರೆಗೆ 40 ರಿಂದ 50 ಲಕ್ಷ ರೂ. ಗಳ ಭೂ ಪರಿಹಾರ ನೀಡಬೇಕೆಂದು ಸಭೆಯಲ್ಲಿ ಆರ್‌.ಬಿ.ತಿಮಾಪುರ್‌ ಆಗ್ರಹಿಸಿದ್ದರು. ಇದರಿಂದ ಸಿಟ್ಟಾದ ಡಿ.ಕೆ.ಶಿವಕಮಾರ್‌, ಮಿಸ್ಟರ್‌ ಮಿನಿಸ್ಟರ್‌ ಸಂಪುಟದ ಸಚಿವರಾಗಿ ನೀವು ಈ ರೀತಿ ಮಾತನಾಡುವುದು ಸರಿಯಲ್ಲ. ಈ ಹಿಂದೆ ಜಲಸಂಪನೂಲ ಸಚಿವರು ಮತ್ತು ಮುಖ್ಯಮಂತ್ರಿಯಾಗಿದ್ದ ಬಸವರಾಜ್‌ ಬೊಮಾಯಿ ಅವರು ಭೂ ಪರಿಹಾರಕ್ಕೆ ಒಂದು ದರ ನಿಗದಿ ಪಡಿಸಿದ್ದಾರೆ. ಈಗ ಸಚಿವರಾಗಿರುವ ನಿಮಗೆ ಗೌರವ ಸಿಗಬೇಕು ಎಂಬ ಕಾರಣಕ್ಕೆ ಅದರ ಮೇಲೆ ಒಂದಿಷ್ಟು ಹೆಚ್ಚಳ ಮಾಡಿ ಪರಿಹಾರ ನೀಡಬಹುದು. ನೀನು ಹೇಳಿದಂತೆ 40 ರಿಂದ 50ಲಕ್ಷ ರೂ.ಗಳವರೆಗೂ ನೀಡಲು ಸಾಧ್ಯವಿಲ್ಲ ಎಂದು ಖಡಕ್ಕಾಗಿ ಹೇಳಿದ್ದಾರೆ.
ಜನರ ಅಭಿಪ್ರಾಯಗಳನ್ನು ನಿಮ ಗಮನಕ್ಕೆ ತರುವುದು ನನ್ನ ಜವಾಬ್ದಾರಿ. ಆ ಕೆಲಸ ಮಾಡಿದ್ದೇನೆ. ನಿಮ ಅನುಭವ ಹಾಗೂ ಅವಕಾಶದಲ್ಲಿ ನಿರ್ಧಾರ ತೆಗೆದುಕೊಳ್ಳಿ ಎಂದು ತಿಮಾಪುರ್‌ ಅಸಮಾಧಾನದಿಂದಲೇ ಪ್ರತಿಕ್ರಿಯಿಸಿದ್ದಾರೆ.ಶಾಸಕರು, ರೈತ ಮುಖಂಡರುಗಳು ಮಾತನಾಡಲಿ. ಇಂತಹ ವೇದಿಕೆಯಲ್ಲಿ ನೀವು ಸಚಿವರಾಗಿ ಈ ರೀತಿ ಮಾತನಾಡಬಾರದು ಎಂದು ಡಿ.ಕೆ.ಶಿವಕುಮಾರ್‌ ಗರಂ ಆಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!