ಉದಯವಾಹಿನಿ, ಬೆಂಗಳೂರು: ರಾಜ್ಯಾದ್ಯಂತ ಇಂದಿನಿಂದ ಮಳೆ ಅಬ್ಬರ ಕಡಿಮೆಯಾದರೂ, ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 11 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆ ಆಗಲಿರುವ ಜಿಲ್ಲೆಗಳು: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ: ಆಗುಂಬೆ, ಉಪ್ಪಿನಂಗಡಿ, ಸುಳ್ಯ, ಕಮ್ಮರಡಿ, ಗೋಪಾಲನಗರ, ಭಾಗಮಂಡಲ, ಪುತ್ತೂರು, ಮಂಗಳೂರು, ಗೇರುಸೊಪ್ಪ, ಉಡುಪಿ, ಟಿಜಿ ಹಳ್ಳಿ, ಶೃಂಗೇರಿ, ಸಿದ್ದಾಪುರ, ಮಾಣಿ, ಮಾಗಡಿ, ಕುಣಿಗಲ್, ಕಳಸ, ಧರ್ಮಸ್ಥಳ, ಕ್ಯಾಸಲ್ರಾಕ್, ಬೆಂಗಳೂರು ನಗರ, ಬೆಳ್ತಂಗಡಿ, ತ್ಯಾಗರ್ತಿ, ಸೋಮವಾರಪೇಟೆ, ಪೊನ್ನಂಪೇಟೆ, ನಾಪೋಕ್ಲು, ಮೂಡುಬಿದಿರೆ, ಕುಮಟಾ, ಕೊಟ್ಟಿಗೆಹಾರ, ಕೊಪ್ಪ, ಕಾರ್ಕಳ, ಜಯಪುರ, ಗೋಕರ್ಣ, ವಿಜಯಪುರ, ಮುಲ್ಕಿ, ಕಾರವಾರ, ಕದ್ರಾ, ಕೋಣನೂರು, ಹೊನ್ನಾವರ, ಹಳಿಯಾಳ, ಇಂಡಿ, ಅರಕಲಗೂಡು, ಚಿಕ್ಕಬಳ್ಳಾಪುರ ಹಾಗೂ ಬಾಳೆಹೊನ್ನೂರಿನಲ್ಲಿ ಗುರುವಾರ ಮಳೆಯಾಗಿದೆ.
ರಾಜಧಾನಿಯ ವಾತಾವರಣ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ನಗರದಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹೆಚ್ಎಎಲ್ನಲ್ಲಿ 27.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ಹಾಗೂ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಈ ತಿಂಗಳಲ್ಲಿ ಅತ್ಯಧಿಕ ಮಳೆ: ರಾಷ್ಟ್ರದ ಹಲವೆಡೆ ಸೆಪ್ಟೆಂಬರ್ ತಿಂಗಳಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇತ್ತೀಚೆಗೆ ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ, ಪ್ರತಿ ವರ್ಷ ಸೆಪ್ಟೆಂಬರ್‌ನಲ್ಲಿ 167.9 ಮಿ.ಮೀ ಮಳೆಯಾಗುತ್ತದೆ. ಈ ಬಾರಿ, ಸಾಮಾನ್ಯಕ್ಕಿಂತ ಶೇ.109ರಷ್ಟು ಹೆಚ್ಚಿನ ಮಳೆಯಾಗುವ ಸೂಚನೆಗಳಿವೆ ಎಂದು ಇಲಾಖೆ ತಿಳಿಸಿತ್ತು. ಈಶಾನ್ಯ ಭಾರತ, ಪೂರ್ವ ಭಾರತ, ದಕ್ಷಿಣ ಭಾರತ ಮತ್ತು ವಾಯುವ್ಯ ಭಾರತದ ಅನೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದ್ದು, ದೇಶದ ಉಳಿದ ಭಾಗಗಳಲ್ಲಿ ಸಾಧಾರಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ ಮೊಹಾಪಾತ್ರ ಅವರು ತಿಳಿಸಿದ್ದಾರೆ.
