ಉದಯವಾಹಿನಿ, ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯ ಸೋಲಿನ ಭೀತಿಯಿಂದ ಬಿಜೆಪಿ ನಾಯಕರುಗಳು ಕಂಗೆಟ್ಟಿದ್ದು, ಪರಸ್ಪರ ಆರೋಪವನ್ನು ಮಾಡುತ್ತಿದ್ದಾರೆ. ಈ ನಡುವೆ ಬೆಳಗಾವಿ ಜಲ್ಲಾ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತಿಗೆ ವೇದಿಕೆಯಲ್ಲೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಮೊದಲಿಗೆ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಸನಗೌಡ ಪಾಟೀಲ್ ಯತ್ನಾಳ ಕೆಲ ದಿನಗಳ ಹಿಂದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿವರು ಶಾಮನೂರು ಶಿವಶಂಕರಪ್ಪ ಹಾಗೂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿರುವುದನ್ನು ಪರೋಕ್ಷವಾಗಿ ತಿಳಿಸಿದರು.
ಇದೇ ವೇಳೆ ಅವರು ವಿಧಾನಸಭಾ ಚುನಾವಣೆಯಲ್ಲಿ ಸೋಲುವುದಕ್ಕೆ ಯಾರೆಲ್ಲ ಕಾರಣ ಅಂತ ತಿಳಿಸಿದರು. ಇದೇ ವೇಳೆ ಯಾರ ಜೊತೆಗೂ ನಾನು ರಾಜೀ ಮಾಡಿಕೊಂಡು ರಾಜಕಾರಣ ಮಾಡಿಲ. ಮನೆಗೆ ಬಂದವರನ್ನು ಸ್ವಾಗತ ಮಾಡುವುದು ನಮ್ಮ ಪರಂಪರೆ. ನಾನೇನೂ ಯಾರನ್ನೂ ಮನೆಯೊಳಗಿನ ರೂಂಗೆ ಕರೆದುಕೊಂಡು ಹೋಗಿ ಮಾತನಾಡಿಲ್ಲ. ಮೂವತ್ತು ವರ್ಷಗಳಿಂದ ನಾನು ರಾಜಕಾರಣದಲ್ಲಿ ಇದ್ದೇನೆ ಅಂತ ನೇರವಾಗಿ ಯತ್ನಾಳು ಅವರಿಗೆ ಟಾಂಗ್ ನೀಡಿದರು.
