ಉದಯವಾಹಿನಿ, ಬೆಂಗಳೂರು: ನಾಡಿನ ಅನ್ನದಾತ ರೈತರ ಬಗ್ಗೆ ಮಾತನಾಡುವಾಗ ಸ್ವಲ್ಪ ಎಚ್ಚರ ಇರಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಎಚ್ಚರಿಕೆ ಕೊಟ್ಟಿದ್ದಾರೆ.ಈ ಕುರಿತು ತಮ ಅಧಿಕೃತ ಸಾಮಾಜಿಕ ಜಾಲತಾಣ Xನಲ್ಲಿ ಶಿವಕುಮಾರ್‌ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ಅವರು, ಈ ಹಿಂದೆ ರೈತರ ಸರಣಿ ಆತಹತ್ಯೆ ವಿಷಯ ಬಂದಾಗ ಎಲ್ಲಿದೆ ಆತಹತ್ಯೆ..? ಸ್ವಂತಕ್ಕೆ ಆತಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕಾಗತ್ತಾ? ಸುಳ್ಳು ಅದೆಲ್ಲಾ ಎಂದು ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ್ದೀರಿ. ಈಗ ರೈತರು ಧಿಕ್ಕಾರ ಕೂಗೋದು ಬಿಟ್ಟು ಬೇರೇನೂ ಮಾಡುವುದಕ್ಕಾಗುವುದಿಲ್ಲ ಎಂದು ರೈತರನ್ನು ಅಸಹಾಯಕರು ಅನ್ನುವ ರೀತಿ ಹೀಯಾಳಿಸಿ ಮಾತನಾಡಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ. ಇಡೀ ದೇಶಕ್ಕೆ ಅನ್ನ ನೀಡುವ ರೈತ ಜೀವನವಿಡೀ ತಾನು ಬದುಕುವುದು, ದುಡಿಯುವುದು ಎಲ್ಲವೂ ಇನ್ನೊಬ್ಬರಿಗಾಗಿಯೇ ಹೊರತು ತನ್ನ ಸ್ವಂತಕ್ಕಾಗಿ ಅಲ್ಲ.

ಕೈಗಾರಿಕೆಗಳಿಗೆ, ರೈಲು, ರಸ್ತೆ, ವಿಮಾನ ನಿಲ್ದಾಣಕ್ಕೆ ಈ ಹಿಂದೆಯೂ ರೈತರ ಬಳಿ ಜಮೀನು ಪಡೆಯಲಾಗಿದೆ. ಹೆಚ್‌ಎಂಟಿ ಕಾರ್ಖಾನೆ ಬಂದಾಗ ಸ್ವತಃ ನಮ ಕುಟುಂಬ ಕೂಡ ಜಮೀನು ನೀಡಿತ್ತು. ಆದರೆ ತಮ ಜೀವನದ ಆಧಾರ ಸ್ತಂಭವಾಗಿರುವ ಜಮೀನನ್ನು ಕಳೆದುಕೊಳ್ಳುತ್ತಿರುವ ರೈತರ ಬಳಿ ಹೇಗೆ ಮಾತನಾಡಬೇಕು, ಯಾವ ರೀತಿ ಸಂವೇದನೆಯಿಂದ ನಡೆದುಕೊಳ್ಳಬೇಕು ಎನ್ನುವ ಕನಿಷ್ಠ ಸೌಜನ್ಯವೂ ಇಲ್ಲದ ತಮಂತಹವರು ಮುಂದೊಂದು ದಿನ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿರುವುದು ನಮ ನಾಡಿನ ದುರಂತ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ. ರೈತರ ಕಷ್ಟ, ಕೃಷಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗೊತ್ತಿರುವ ನಿಜವಾದ ಒಕ್ಕಲಿಗ ಅನ್ನದಾತರ ಬಗ್ಗೆ ಈ ರೀತಿಯ ದರ್ಪದ ಮಾತುಗಳನ್ನು ಎಂದಿಗೂ ಆಡುವುದಿಲ್ಲ. ಒಕ್ಕಲಿಕೆಯನ್ನು, ಮಣ್ಣಿನ ಮಕ್ಕಳನ್ನು ಅಪಮಾನ ಮಾಡುತ್ತಿರುವ ತಮ ಈ ದುರ್ನಡತೆಯ ಪರಿಣಾಮ ಮುಂದೆ ಗೊತ್ತಾಗಲಿದೆ ಎಂದು ಅಶೋಕ್‌, ಡಿಸಿಎಂಗೆ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!