ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ನಗರ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ (Ballot Paper) ಬಳಕೆಗೆ ರಾಜ್ಯ ಸರ್ಕಾರದ ನಿರ್ಧಾರ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಬಿಜೆಪಿ (BJP) ನಾಯಕರು ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಪಕ್ಷ ನಾಯಕ ಆರ್ ಅಶೋಕ್ (R Ashok) ಎಕ್ಸ್‌ನಲ್ಲಿ ಕಿಡಿಕಾರಿದ್ದು, ಬ್ಯಾಲೆಟ್ ಪೇಪರ್ = ಬೋಗಸ್ ವೋಟಿಂಗ್; ಬ್ಯಾಲೆಟ್ ಪೇಪರ್ = ಬೂತ್ ಕ್ಯಾಪ್ಚರಿಂಗ್ ಎಂದು ಟೀಕಿಸಿದ್ದಾರೆ.
ಹ್ಯಾಟ್ರಿಕ್ ಝೀರೋ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಂಪೂರ್ಣ ನೆಲಕಚ್ಚಿರುವ ಕಾಂಗ್ರೆಸ್ ಪಕ್ಷ, ರಾಹುಲ್ ಗಾಂಧಿ ಅವರನ್ನು ರಕ್ಷಿಸಲು, ಚುನಾವಣಾ ಆಯೋಗದ ಬಗ್ಗೆ, ಚುನಾವಣಾ ಪ್ರಕ್ರಿಯೆ ಬಗ್ಗೆ, ಮತಯಂತ್ರಗಳ ಬಗ್ಗೆ ಇಲ್ಲಸಲ್ಲದ ಅನುಮಾನ ಬಿತ್ತು ಊಹಾಪೋಹ ಸೃಷ್ಟಿ ಮಾಡುವ ಪ್ರಯತ್ನ ಮಾಡುತ್ತಲೇ ಬಂದಿದೆ. ಭಾರತದ ಪ್ರಜ್ಞಾವಂತ ಮತದಾರರು ಈ ಹತಾಶ ಪ್ರಯತ್ನವನ್ನ ತಿರಸ್ಕಾರ ಮಾಡುತ್ತಲೇ ಬಂದಿದ್ದಾರೆ. ಆದರೆ ಮುಂಬರುವ ಸ್ಥಳೀಯ ಚುನಾವಣೆಗಳಲ್ಲಿ (ಸ್ಥಳೀಯ ಸಂಸ್ಥೆಗಳು) ಇವಿಎಂ ಯಂತ್ರ ಬದಲಾಗಿ ಮತಪತ್ರ (ಬ್ಯಾಲಟ್ ಪೇಪರ್) ಬಳಕೆಗೆ ನಿರ್ಧರಿಸಿರುವ ಕಾಂಗ್ರೆಸ್ ಸರ್ಕಾರದ ಸಂಪುಟದ ತೀರ್ಮಾನ ತೀರಾ ಕೆಳಮಟ್ಟದಾಗಿದ್ದು, ಒಬ್ಬ ವ್ಯಕ್ತಿ, ಒಂದು ಕುಟುಂಬದ ರಕ್ಷಣೆಗಾಗಿ, ಸಮರ್ಥನೆಗಾಗಿ ಇಡೀ ದೇಶದ ಪ್ರಜಾಪ್ರಭುವ ವ್ಯವಸ್ಥೆಯನ್ನೇ ಬುಡಮೇಲು ಮಾಡುವ ಪಾಪದ ಕೆಲಸಕ್ಕೆ ಕಾಂಗ್ರೆಸ್ ಸರ್ಕಾರ ಕೈಹಾಕಿದೆ ಎಂದು ಖಂಡನೆ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!