ಉದಯವಾಹಿನಿ,ಬೆಂಗಳೂರು: ನೀವು ಯಾರಿಗೂ ಲಂಚ ಕೊಡಬೇಡಿ. ನೀವು ಲಂಚ ತಗೋ ಬೇಡಿ. ನಾನು ಯಾರನ್ನು ವರ್ಗಾವಣೆ ಮಾಡಿಸೋಲ್ಲ. ಭ್ರಷ್ಟಾಚಾರದ ವಿರುದ್ಧ ಜನರು ಮಾಹಿತಿ ನೀಡಲು ಜಿಲ್ಲಾ ಪಂಚಾಯಿತಿ ಸೇರಿದಂತೆ ಸರ್ಕಾರಿ ಕಚೇರಿಯಲ್ಲಿ ಬೋರ್ಡ್ ಹಾಕಿಸಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ರಾಮನಗರ ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ನಮ್ಮನ್ನು ಜನ ಆಯ್ಕೆ ಮಾಡಿದ್ದಾರೆ. ಜನರ ಸೇವೆ ಮಾಡಲು ಅವಕಾಶ ಕೊಟ್ಟಿದ್ದಾರೆ. ಸರ್ಕಾರದ ಸೇವೆ ಮಾಡಲು ನೀವಿದ್ದಿರಿ. ರಾಜಕಾರಣಿಗಳು ಅಧಿಕಾರಿಗಳ ಬಳಿ ಜನ ಬರೋದು ಸಮಸ್ಯೆ ಬಗೆಹರಿಯದೇ ಇದ್ದಾಗ.
ಆ ಸಮಸ್ಯೆ ಬಗೆಹರಿಸಬೇಕಾದ್ದು ನಮ್ಮ ಕರ್ತವ್ಯ. ಬಿಜೆಪಿ ಆಡಳಿತ ವೈಖರಿಯನ್ನು ನೋಡಿದ್ದಾರೆ. ಅದು ಜನರಿಗೆ ಹತ್ತಿರವಾಗುವ ಆಡಳಿತವಲ್ಲ, ಕರೆಪ್ಷನ್ ಕ್ಯಾಪಿಟಲ್ ಎಂಬ ಕಾರಣಕ್ಕೆ ಬಿಜೆಪಿ ಬದಲಾಯಿಸಿ ನಮ್ಮನ್ನು ಅಧಿಕಾರದಲ್ಲಿ ಕೂರಿಸಿದ್ದಾರೆ. ಹೀಗಾಗಿ ಲಂಚದಿಂದ ಎಲ್ಲರೂ ದೂರ ಉಳಿಯಬೇಕು ಎಂದರು. ಇಡೀ ಜಿಲ್ಲೆಗೆ ಏನೋ ರೋಗ ಬಂದಿದೆ. ಅಧಿಕಾರಿಗಳು ಹಿಂದಿನ ಸರಕಾರದ ಮತ್ತಲ್ಲೇ ಇರುವಂತಿದೆ. ನಿಮ್ಮ ವರ್ತನೆ ಸರಿ ಮಾಡಿಕೊಳ್ಳಬೇಕು. ಜನರ ಸಮಸ್ಯೆಯನ್ನು ಕಾನೂನು ಚೌಕಟ್ಟಿನೊಳಗೆ ಪರಿಹರಿಸಿ. ನಾನು ಯಾರನ್ನು ವರ್ಗಾವಣೆ ಮಾಡಿಸೋಲ್ಲ. ನಿಮ್ಮತ್ರ ಯಾವ ರೀತಿ ಕೆಲಸ ಮಾಡಿಸಬೇಕು ಎಂದು ಗೊತ್ತಿದೆ. ಔಟ್ ಆಫ್ ದಿ ವೇ ಹೋಗಬೇಡಿ ಎಂದು ಎಚ್ಚರಿಕೆ ನೀಡಿದರು.
