ಉದಯವಾಹಿನಿ, ಚಿಕ್ಕಮಗಳೂರು: ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ತಮಟೆ ಶಬ್ಧಕ್ಕೆ ಎಂಎಲ್‍ಸಿ ಸಿ.ಟಿ.ರವಿ ಭರ್ಜರಿ ಡ್ಯಾನ್ಸ್ ಮಾಡಿದ್ದಾರೆ. ಚಿಕ್ಕಮಗಳೂರು ನಗರದ ಓಂಕಾರೇಶ್ವರ ದೇಗುಲದ ಬಳಿ ನಡುರಸ್ತೆಯಲ್ಲಿ ಕಾರ್ಯಕರ್ತರ ಜೊತೆ ಕುಣಿದು ಕುಪ್ಪಳಿಸಿದ್ದಾರೆ. ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಮೆರವಣಿಗೆ ಸಾಗುತ್ತಿದೆ. ಮೆರವಣಿಗೆಯಲ್ಲಿ ಡಿಜೆ ಶಬ್ಧಕ್ಕೆ ಯುವತಿಯರು ಹಾಗೂ ಯುವಕರು ಹುಚ್ಚೆದ್ದು ಕುಣಿದು ಕುಪ್ಪಳಿಸಿದ್ದಾರೆ. ಚಿಕ್ಕಮಗಳೂರು ನಗರದ ವಿಜಯಪುರ ರಸ್ತೆಯಲ್ಲಿ ಮೆರವಣಿಗೆ ಸಾಗುತ್ತಿದೆ. ಒಂದೆಡೆ ಯುವಕರು, ಮತ್ತೊಂದೆಡೆ ಯುವತಿಯರ ಭರ್ಜರಿ ಡ್ಯಾನ್ಸ್ ಮಾಡುತ್ತಿದ್ದಾರೆ. ಗಣೇಶ ವಿಸರ್ಜನಾ ಮೆರವಣಿಗೆ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಚಿಕ್ಕಮಗಳೂರು ನಗರದಾದ್ಯಂತ ಖಾಕಿ ಹೈ ಅಲರ್ಟ್ ಆಗಿದೆ.
