ಉದಯವಾಹಿನಿ, ಕೋಲ್ಕತ್ತಾ: ಮಹಿಳೆಯೊಬ್ಬಳ ಹುಟ್ಟುಹಬ್ಬದ ದಿನವೇ ಆಕೆಯ ಮೇಲೆ ಇಬ್ಬರು ಪರಿಚಯಸ್ಥರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿರುವುದು ಕೋಲ್ಕತ್ತಾದಲ್ಲಿ ನಡೆದಿದೆ. ನಗರದ ದಕ್ಷಿಣ ಹೊರವಲಯದಲ್ಲಿರುವ ರೀಜೆಂಟ್ ಪಾರ್ಕ್ ಪ್ರದೇಶದಲ್ಲಿ ಅತ್ಯಾಚಾರ ನಡೆದಿದೆ. ಕೃತ್ಯ ಎಸಗಿ ನಾಪತ್ತೆಯಾಗಿದ್ದ ಇಬ್ಬರು ಆರೋಪಿಗಳನ್ನು ಚಂದನ್ ಮಲಿಕ್ ಮತ್ತು ದೀಪ್ ಎಂದು ಗುರುತಿಸಲಾಗಿದೆ. ದೀಪ್ ಸರ್ಕಾರಿ ಉದ್ಯೋಗಿ ಎಂದು ವರದಿಯಾಗಿದೆ. ಕೋಲ್ಕತ್ತಾ: ಮಹಿಳೆಯೊಬ್ಬಳ ಹುಟ್ಟುಹಬ್ಬದ (Birthday) ದಿನವೇ ಆಕೆಯ ಮೇಲೆ ಇಬ್ಬರು ಪರಿಚಯಸ್ಥರು ಸೇರಿ ಸಾಮೂಹಿಕ ಅತ್ಯಾಚಾರ ಎಸಗಿರುವುದು ಕೋಲ್ಕತ್ತಾದಲ್ಲಿ ನಡೆದಿದೆ.
ನಗರದ ದಕ್ಷಿಣ ಹೊರವಲಯದಲ್ಲಿರುವ ರೀಜೆಂಟ್ ಪಾರ್ಕ್ ಪ್ರದೇಶದಲ್ಲಿ ಅತ್ಯಾಚಾರ ನಡೆದಿದೆ. ಕೃತ್ಯ ಎಸಗಿ ನಾಪತ್ತೆಯಾಗಿದ್ದ ಇಬ್ಬರು ಆರೋಪಿಗಳನ್ನು ಚಂದನ್ ಮಲಿಕ್ ಮತ್ತು ದೀಪ್ ಎಂದು ಗುರುತಿಸಲಾಗಿದೆ. ದೀಪ್ ಸರ್ಕಾರಿ ಉದ್ಯೋಗಿ ಎಂದು ವರದಿಯಾಗಿದೆ.
ಈ ಸಂಬಂಧ ಮಹಿಳೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ. ದೂರಿನಲ್ಲಿ, ಮಹಿಳೆಗೆ ಚಂದನ್ ಹಲವು ದಿನಗಳಿಂದ ಪರಿಚಯವಾಗಿದ್ದ. ಆತ ತನ್ನನ್ನು ದಕ್ಷಿಣ ಕೋಲ್ಕತ್ತಾದಲ್ಲಿರುವ ದುರ್ಗಾ ಪೂಜಾ ಸಮಿತಿಯ ಮುಖ್ಯಸ್ಥ ಎಂದು ಹೇಳಿಕೊಂಡಿದ್ದ. ಅಲ್ಲದೇ ಆತ ದೀಪ್‌ನನ್ನು ಪರಿಚಯ ಮಾಡಿಕೊಟ್ಟಿದ್ದ. ಮಹಿಳೆಯನ್ನೂ ಸಮಿತಿಯಲ್ಲಿ ಸೇರಿಸಿಕೊಳ್ಳುವುದಾಗಿ ಭರವಸೆ ನೀಡಿದ್ರು ಎಂದು ಉಲ್ಲೇಖಿಸಲಾಗಿದೆ.
