ಉದಯವಾಹಿನಿ, ಶಿವಮೊಗ್ಗ: ನಗರದ ಮಲವಗೊಪ್ಪದ ಬಳಿ ಸಂಭವಿಸಿದ ಬೈಕ್ ಅಪಘಾತದಲ್ಲಿ ಇನ್ನೇನು 15 ದಿನಗಳಲ್ಲಿ ಹನೆಮಣೆ ಏರಬೇಕಿದ್ದ ಯುವತಿಯೊಬ್ಬಳು ಸಾವನ್ನಪ್ಪಿದ್ದಾಳೆ.
ಮೃತ ಯುವತಿಯನ್ನು ಕವಿತಾ (26) ಎಂದು ಗುರುತಿಸಲಾಗಿದೆ. ಆಕೆ ತನ್ನ ಸಹೋದರನ ಜೊತೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಈ ಆಫಘಾತ ಸಂಭವಿಸಿದೆ. ಇನ್ನೊಂದು ಬೈಕ್‌ನಲ್ಲಿ ಮಿತಿಮೀರಿದ ಲಗೇಜ್‌ ತುಂಬಿಕೊಂಡ ವ್ಯಕ್ತಿ ಇವರು ಹೋಗುತ್ತಿದ್ದ ಬೈಕ್‌ಗೆ ತಾಕಿಸಿದ್ದಾನೆ. ಈ ವೇಳೆ ಯುವತಿಯ ಸಹೋದರ ಫುಟ್‌ಪಾತ್‌ ಮೇಲೆ ಬಿದ್ದರೆ, ಆಕೆ ರಸ್ತೆಗೆ ಬಿದ್ದಿದ್ದಳು. ಈ ವೇಳೆ ಹಿಂದೆ ಇದ್ದ ಸಿಟಿ ಬಸ್‌ ಆಕೆಯ ಮೇಲೆ ಹರಿದಿದೆ. ಪರಿಣಾಮ ಕವಿತಾ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಕವಿತಾಳಿಗೆ ಮದುವೆ ನಿಶ್ಚಯವಾಗಿತ್ತು, ಆಕೆ 15 ದಿನಗಳಲ್ಲಿ ಹಸೆಮಣೆ ಏರಬೇಕಿತ್ತು. ದುರಾದೃಷ್ಟವಶಾತ್‌ ಆಕೆ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ. ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

Leave a Reply

Your email address will not be published. Required fields are marked *

error: Content is protected !!