ಉದಯವಾಹಿನಿ, ಚಂಡೀಗಢ: ಹರಿಯಾಣದ ಫರಿದಾಬಾದ್‌ನ ಕಟ್ಟಡ ಒಂದರಲ್ಲಿ ಎಸಿಯ ಕಂಪ್ರೆಸರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಈ ಅವಘಡದಲ್ಲಿ ಅವರ ಸಾಕು ನಾಯಿ ಕೂಡ ಸಾವಿಗೀಡಾಗಿದೆ.
ಮೃತರನ್ನು ಸಚಿನ್ ಕಪೂರ್, ಅವರ ಪತ್ನಿ ರಿಂಕು ಕಪೂರ್ ಮತ್ತು ಅವರ ಮಗಳು ಸುಜನ್ ಕಪೂರ್ ಎಂದು ಗುರುತಿಸಲಾಗಿದೆ. ನಾಲ್ಕು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಸೋಮವಾರ (ಸೆ.8) ಬೆಳಗಿನ ಜಾವ 1:30ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ. ಈ ವೇಳೆ, ಅವರು ವಾಸವಾಗಿದ್ದ ಎರಡನೇ ಮಹಡಿಯಲ್ಲಿ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಇದರಿಂದ ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಮತ್ತೊಂದು ಕೋಣೆಯಲ್ಲಿ ಸಚಿನ್‌ ಅವರ ಮಗ ಬಚಾವ್‌ ಆಗಲು ಕಿಟಕಿಯಿಂದ ಹಾರಿದ್ದಾನೆ. ಆತ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಸ್ಫೋಟದ ಶಬ್ಧಕ್ಕೆ ಅಕ್ಕಪಕ್ಕದ ಜನ ಎದ್ದು ಕಟ್ಟಡದಲ್ಲಿದ್ದ ಇತರರನ್ನು ರಕ್ಷಿಸಿದ್ದಾರೆ. ಆ ಕಟ್ಟಡದ ನಾಲ್ಕನೇ ಮಹಡಿಯಲ್ಲಿ 7 ಜನ ವಾಸವಾಗಿದ್ದರು. ಇನ್ನೂ ಮೊದಲನೇ ಮಹಡಿಯನ್ನು ಸಚಿನ್‌ ಕಪೂರ್‌ ಕಚೇರಿಯಾಗಿ ಮಾಡಿಕೊಂಡಿದ್ದರು. ಅಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!