ಉದಯವಾಹಿನಿ, ಗೌರಿ ಸಿನಿಮಾದ ಮೂಲಕ ಭರವಸೆ ಮೂಡಿಸಿದ್ದ, ಸದ್ಯ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟ ಸಮರ್ಜಿತ್ ಲಂಕೇಶ್ ಅವರಿಗೆ ಎರಡು ಪ್ರಶಸ್ತಿಗಳು ಲಭಿಸಿವೆ. `ಗೌರಿ’ ಚಿತ್ರಕ್ಕಾಗಿ ಸೈಮಾ ಅತ್ಯುತ್ತಮ ಚೊಚ್ಚಲ ನಟ ಪ್ರಶಸ್ತಿ ಹಾಗೂ ಅತ್ಯುತ್ತಮ ಉದಯೋನ್ಮುಖ ನಟನಿಗಾಗಿ ಲುಮಿಯರ್ ರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡಿದ್ದಾರೆ ಸಮರ್ಜಿತ್.ಉದಯೋನ್ಮುಖ ನಟ ಸಮರ್ಜಿತ್ ಲಂಕೇಶ್ ತಮ್ಮ ವೃತ್ತಿಜೀವನಕ್ಕೆ ಮತ್ತೊಂದು ಗರಿ ಸೇರಿಸಿದ್ದಾರೆ. ಸತತವಾಗಿ ಎರಡು ಪ್ರತಿಷ್ಠಿತ ಪ್ರಶಸ್ತಿಗಳನ್ನು ಗಳಿಸುವ ಮೂಲಕ ಭಾರತೀಯ ಚಿತ್ರರಂಗದ ಭರವಸೆಯ ಹೊಸ ಪ್ರತಿಭೆಗಳಲ್ಲಿ ಒಬ್ಬರಾಗಿ ಹೊರ ಹೊಮ್ಮಿದ್ದಾರೆ. ಇದೀಗ ಸಮರ್ಜಿತ್ ಬಾಲಿವುಡ್ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.
ದುಬೈನಲ್ಲಿ ನಡೆದ 13ನೇ ದಕ್ಷಿಣ ಭಾರತ ಅಂತಾರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ 2025ರ ಸಮಾರಂಭದಲ್ಲಿ ಸಮರ್ಜಿತ್ ತಮ್ಮ ಪ್ರಥಮ ಚಿತ್ರ `ಗೌರಿ’ಯಲ್ಲಿನ ಅದ್ಭುತ ಅಭಿನಯಕ್ಕಾಗಿ ಅತ್ಯುತ್ತಮ ಚೊಚ್ಚಲ ನಟ (ಕನ್ನಡ) ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರ ಈ ಭರವಸೆಯ ಹೆಜ್ಜೆ, ವಿಮರ್ಶಕರು ಮತ್ತು ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದೆ.

Leave a Reply

Your email address will not be published. Required fields are marked *

error: Content is protected !!