ಉದಯವಾಹಿನಿ, ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ ಸಂಘಟನೆಯ ಪ್ರಮುಖ ಉಗ್ರ ಸೇರಿದಂತೆ ಇಬ್ಬರು ಭಯೋತ್ಪಾದಕರು ಹತ್ಯೆಗೀಡಾಗಿದ್ದಾರೆ. ಗುಂಡಿನ ಚಕಮಕಿಯಲ್ಲಿ ಮೂವರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರು ನಿರ್ದಿಷ್ಟ ಗುಪ್ತಚರ ಮಾಹಿತಿಯನ್ನು ಸೇನೆಗೆ ನೀಡಿದ್ದರು. ಈ ಮಾಹಿತಿ ಆಧರಿಸಿ ಭಾರತೀಯ ಸೇನೆ, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಸಿಆರ್‌ಪಿಎಫ್ ಜಂಟಿಯಾಗಿ ಕಾರ್ಯಾಚರಣೆ ನಡೆಸಿವೆ. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪ್ರತಿಯಾಗಿ ಭದ್ರತಾ ಸಿಬ್ಬಂದಿ ಸಹ ಗುಂಡು ಹಾರಿಸಿದ್ದಾರೆ. ಸೇನೆ ನಡೆಸಿದ ದಾಳಿಯಿಂದ ಇಬ್ಬರು ಉಗ್ರರು ಸಾವಿಗೀಡಾಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!