ಉದಯವಾಹಿನಿ, ಕಠ್ಮಂಡು: ಜೆನ್‌ ಝಿ ತಲೆಮಾರು ನಡೆಸಿದ ಕಂಡು ಕೇರಳರಿಯದ ಹೋರಾಟಕ್ಕೆ ನೇಪಾಳ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಪ್ರತಿಟನಾಕಾರರು ನೇಪಾಳದ ಮಾಜಿ ಪ್ರಧಾನಿ ಜಲನಾಥ್‌ ಖನಾಲ್‌ ನಿವಾಸಕ್ಕೆ ಬೆಂಕಿ ಹಚ್ಚಿದ್ದು, ಅವರ ಪತ್ನಿ ರಾಜಲಕ್ಷ್ಮೀ ಚಿತ್ರಾಕರ್‌ ಜೀವಂತವಾಗಿ ಸುಟ್ಟು ಹೋಗಿದ್ದಾರೆ ಎಂದು ವರದಿಯೊಂದು ತಿಳಿಸಿದೆ. ಪ್ರತಿಭನಾಕಾರರು ಮನೆಗೆ ಬೆಂಕಿ ಹಚ್ಚಿದ ವೇಳೆ ರಾಜಲಕ್ಷ್ಮೀ ಅದರೊಳಗೆ ಸಿಕ್ಕಿ ಹಾಕಿಕೊಂಡಿದ್ದರು. ಜಲನಾತ್‌ ಖನಲ್‌ ಅದೃಷ್ಟವಶಾತ್‌ ಪಾರಾಗಿದ್ದಾರೆ.
ನೇಪಾಳ ರಾಜಧಾನಿ ಕಠ್ಮಂಡುವಿನ ಡಲ್ಲು ಪ್ರದೇಶದಲ್ಲಿರುವ ಜಲನಾಥ್‌ ಖನಾಲ್‌ ಮನೆಗೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿ ಬೆಂಕಿ ಹಚ್ಚಿದ್ದರು. ಗಾಯಗೊಂಡ ರಾಜಲಕ್ಷ್ಮೀ ಚಿತ್ರಾಕರ್‌ ಅವರನ್ನು ಕೂಡಲೇ ಕೀರ್ತಿಪುರ ಬರ್ನ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.ಸೋಶಿಯಲ್‌ ಮೀಡಿಯಾದ ಮೇಲೆ ಸರ್ಕಾರ ಹೇರಿರುವ ನಿರ್ಬಂಧವನ್ನು ಪ್ರಶ್ನಿಸಿ ಮತ್ತು ಭಷ್ಟಾಚಾರವನ್ನು ವಿರೋಧಿಸಿ ಸಾವಿರಾರು ಮಂದಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈಗಾಗಲೇ ಪ್ರದಾನಿ ಕೆ.ಪಿ. ಶರ್ಮಾ ಒಲಿ ಮತ್ತು ಅಧ್ಯಕ್ಷ ರಾಮಚಂದ್ರ ಪೌಡೆಲ್‌ ರಾಜೀನಾಮೆ ನೀಡಿದ್ದಾರೆ. ಜತೆಗೆ ಸೋಶಿಯಲ್‌ ಮೀಡಿಯಾ ಮೇಲಿನ ನಿರ್ಬಂಧವನ್ನು ಹಿಂಪಡೆಯಲಾಗಿದೆ.
ಒಲಿ ಸರ್ಕಾರದ ವಿತ್ತ ಸಚಿವ ಬಿಷ್ಣು ಪ್ರಸಾದ್‌ ಪೌಡೆಲ್‌ ಅವರನ್ನು ಪ್ರತಿಭಟನಾಕಾರರು ಬೀದಿಯಲ್ಲಿ ಅಟ್ಟಾಡಿಸಿಕೊಂಡು ಹೋಗುವ ವಿಡಿಯೊ ವೈರಲ್‌ ಆಗಿದೆ. ಅವರನ್ನು ಕಿಕ್ ಮಾಡುವ, ಎಳೆದಾಡುವ ದೃಶ್ಯ ಇಂಟರ್‌ನೆಟ್‌ನಲ್ಲಿ ಹರಿದಾಡುತ್ತಿದೆ. ಈಗಾಗಲೇ ಹಿಂಸಾತ್ಮಕ ಪ್ರತಿಭಟನೆಗೆ 21 ಮಂದಿ ಅಸುನೀಗಿದ್ದಾರೆ.

Leave a Reply

Your email address will not be published. Required fields are marked *

error: Content is protected !!