ಉದಯವಾಹಿನಿ, ನವದೆಹಲಿ: ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡ, ಸೆಪ್ಟಂಬರ್ 10 ರಂದು ದುಬೈನ ದುಬೈ ಇಂಟರ್‌ನ್ಯಾಷನಲ್ ಕ್ರೀಡಾಂಗಣದಲ್ಲಿ ನಡೆಯುವ 2025ರ ಏಷ್ಯಾ ಕಪ್ (Asia Cup 2025) ಟೂರ್ನಿಯ ಪಂದ್ಯದಲ್ಲಿ (IND vs UAE) ಯುಎಇ ವಿರುದ್ದ ತನ್ನ ಮೊದಲನೇ ಪಂದ್ಯದಲ್ಲಿ ಕಾದಾಟ ನಡೆಸಲಿದೆ. ಆ ಮೂಲಕ ಏಷ್ಯಾ ಕಪ್ ಟೂರ್ನಯಲ್ಲಿ ತನ್ನ ಅಭಿಯಾನವನ್ನು ಆರಂಭಿಸಲಿದೆ. ಈ ಪಂದ್ಯದ ಬಳಿಕ ಟೀಮ್ ಇಂಡಿಯಾ ಸೆಪ್ಟಂಬರ್ 14 ರಂದು ಇದೇ ಅಂಗಣದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಕಾದಾಟ ನಡೆಸಲಿದೆ. 7 ತಿಂಗಳ ಬಳಿಕ ಭಾರತ ಅಂತಾರಾಷ್ಟ್ರೀಯ ಟಿ20ಐ ಕ್ರಿಕೆಟ್‌ಗೆ ಮರಳುತ್ತಿದೆ.
ಉಪ ನಾಯಕ ಶುಭಮನ್ ಗಿಲ್ ಅವರು ದೀರ್ಘಾವಧಿಯ ಬಳಿಕ ಭಾರತ ಟಿ20ಐ ತಂಡಕ್ಕೆ ಮರಳಿದ್ದಾರೆ. ಈ ಹಿನ್ನೆಲೆಯಲ್ಲಿ ಸಂಜು ಸ್ಯಾಮ್ಸನ್ ಅವರಿಗೆ ಪ್ಲೇಯಿಂಗ್ xiನಲ್ಲಿ ಅವಕಾಶ ಸಿಗುವುದು ಅನುಮಾನ. ಇವರ ಬದಲು ಮಧ್ಯಮ ಕ್ರಮಾಂಕದಲ್ಲಿ ಮ್ಯಾಚ್ ಫಿನಿಷರ್ ಆಗಿರುವ ಜಿತೇಶ್ ಶರ್ಮಾ ವಿಕೆಟ್ ಕೀಪರ್ ಆಗಿ ಆಡುವ ಸಾಧ್ಯತೆ ಇದೆ. ಇವರಿಗೆ 6 ಅಥವಾ 7ನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆ ಇದೆ.
ನಂತರ ಮಧ್ಯಮ ಕ್ರಮಾಂಕದಲ್ಲಿ ನಾಯಕ ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ ಆಡಿದರೆ ಆಲ್‌ರೌಂಡರ್‌ಗಳಾಗಿ ಹಾರ್ದಿಕ್ ಪಾಂಡ್ಯ ಹಾಗೂ ಅಕ್ಷರ್ ಪಟೇಕ್ ಆಡಬಹುದು. ಮ್ಯಾಚ್ ಫಿನಿಷರ್ ಆಗಿ ರಿಂಕು ಸಿಂಗ್‌ಗೆ ಅವಕಾಶ ಸಿಗಬಹುದು. ಇನ್ನು ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಅವರು ಪಾರ್ಟ್ ಟೈಮ್ ಸ್ಪಿನ್ ಬೌಲ್ ಮಾಡಬಹುದು.
