ಉದಯವಾಹಿನಿ, ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ, ಸಾಹಸಸಿಂಹ, ಅಭಿನವ ಭಾರ್ಗವ ಡಾ. ವಿಷ್ಣುವರ್ಧನ್‌ಗೆ ಅಂತೂ ಇಂತೂ ರಾಜ್ಯ ಸರ್ಕಾರ ಕರ್ನಾಟಕ ರತ್ನ ಕೊಡುವ ಮನಸ್ಸು ಮಾಡಿದೆ. ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಕೊಡಬೇಕು ಎಂಬ ಆಗ್ರಹ ಹಲವು ವರ್ಷಗಳಿಂದಲೂ ಇತ್ತು. ಅವರ ಅಭಿಮಾನಿಗಳು, ಕನ್ನಡ ಸಿನಿಮಾ ವೀಕ್ಷಕರು, ಕನ್ನಡಿಗರು ವಿಷ್ಣುಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಬೇಕು ಅಂತ ಆಗ್ರಹಿಸಿದ್ದರು. ಈ ಆಗ್ರಹಕ್ಕೆ ರಾಜ್ಯ ಸರ್ಕಾರ ಮಣಿದಿದೆ. ಇಂದು ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಡಾ. ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದೆ. ಜೊತೆಗೆ ಹಿರಿಯ ನಟಿ ಬಿ.ಸರೋಜಾದೇವಿಯವರಿಗೂ ಕರ್ನಾಟಕ ರತ್ನ ಘೋಷಣೆಯಾಗಿದೆ.
ಖ್ಯಾತ ನಟ, ಸಾಹಸಸಿಂಹ ಡಾ. ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಗುರುವಾರ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ವಿಷ್ಣುವರ್ಧನ್‌ಗೆ ಮರಣೋತ್ತರವಾಗಿ ಕರ್ನಾಟಕ ರತ್ನ ನೀಡಲು ಒಪ್ಪಿಗೆ ನೀಡಲಾಗಿದೆ. ಸದ್ಯ ವಿಷ್ಣುವರ್ಧನ್ ಹೆಸರು ಘೋಷಿಸಲಾಗಿದ್ದು, ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದ ರೂಪುರೇಷೆಗಳನ್ನು ಕನ್ನಡ ಸಂಸ್ಕೃತಿ ಇಲಾಖೆ ತೀರ್ಮಾನ ಮಾಡುತ್ತೆ ಅಂತ ಸಚಿವ ಹೆಚ್‌ಕೆ ಪಾಟೀಲ್ ಹೇಳಿದ್ದಾರೆ.
