ಉದಯವಾಹಿನಿ, ಹೊಸ ಡೆಲ್ಲಿ: ವಿಶ್ವಕಪ್ ಟೂರ್ನಿಗೆ ದಿನಗಣನೆ ಆರಂಭವಾಗಿದ್ದು ಟೂರ್ನಿಯ ವೇಳಾಪಟ್ಟಿ ಕೂಡ ಈಗಾಗಲೇ ಬಿಡುಗಡೆಯಾಗಿದೆ. ಈ ಸಂದರ್ಭದಲ್ಲಿ ಯಾವ ತಂಡ ಈ ಬಾರಿಯ ವಿಶ್ವಕಪ್ ಗೆಲ್ಲಬಹುದು? ಯಾವ ತಂಡಕ್ಕೆ ಗೆಲ್ಲುವ ಅವಕಾಶ ಹೆಚ್ಚಿದೆ ಎಂಬುದರ ಬಗ್ಗೆ ಸಾಕಷ್ಟು ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಮಾಜಿ ಕ್ರಿಕೆಟಿಗ ಕ್ರಿಸ್ ಶ್ರೀಕಾಂತ್ ಕೂಡ ಈ ಬಗ್ಗೆ ಪ್ರತಿಕ್ರಿಯೆ ನಿಡಿದ್ದು ಈ ಬಾರಿಯ ವಿಶ್ವಕಪ್ ಗೆಲ್ಲುವ ಮೂರು ನೆಚ್ಚಿನ ತಂಡಗಳನ್ನು ಹೆಸರಿಸಿದ್ದಾರೆ. ಅಂದಹಾಗೆ 1983ರ ವಿಶ್ವಕಪ್ ವಿಜೇತ ತಂಡದ ಬ್ಯಾಟಿಂಗ್ ಸ್ಟಾರ್ ಕ್ರಿಸ್ ಶ್ರೀಕಾಂತ್ ಈ ಬಾರಿಯ ವಿಶ್ವಕಪ್ ಗೆಲ್ಲುವ ಸಾಮರ್ಥ್ಯವಿರುವ ಮೂರು ತಂಡಗಳನ್ನು ಹೆಸರಿಸಿದ್ದಾರೆ.
ಆತಿಥೇಯ ಭಾರತ ತಂಡ, ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಮತ್ತು ಹಾಲಿ ಚಾಂಪಿಯನ್ ಇಂಗ್ಲೆಂಡ್ ಈ ಮೂರು ತಂಡಗಳ ಪೈಕಿ ಯಾವುದಾದರೂ ಒಂದು ತಂಡ ಈ ಬಾರಿಯ ವಿಶ್ವಕಪ್ ಗೆಲ್ಲುವುದು ನಿಶ್ಚಿತ ಎಂದಿದ್ದಾರೆ ಕ್ರಿಸ್ ಶ್ರೀಕಾಂತ್. ತಮ್ಮ ಈ ಅಭಿಪ್ರಾಯಕ್ಕೆ ಶ್ರೀಕಾಂತ್ ಕಾರಣವನ್ನು ಕೂಡ ವಿವರಿಸಿದ್ದಾರೆ. ಭಾರತ ತಂಡಕ್ಕೆ ತವರಿನ ವಾತಾವರಣದ ಲಾಭ ದೊರೆಯಲಿದ್ದು ಇದರಿಂದಾಗಿ ಭಾರ ವಿಶ್ವಕಪ್ ಗೆಲ್ಲುವ ಅವಕಾಶ ಹೆಚ್ಚಿದೆ ಎಂದಿದ್ದಾರೆ. ಇನ್ನು ಐಪಿಎಲ್‌ನಿಂದಾಗಿ ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್‌ನ ಆಟಗಾರರು ಕೂಡ ಹೆಚ್ಚಿನ ಪ್ರಮಾಣದಲ್ಲಿ ಭಾರತ ಕಳೆಯುವ ಕಾರಣ ಇಲ್ಲಿನ ವಾತಾವರಣ ಅವರಿಗೂ ಪರಿಚಿತವಾಗಿದ್ದು ಅದು ಈ ತಂಡಗಳಿಗೂ ನೆರವಾಗಲಿದೆ ಎಂದಿದ್ದಾರೆ.
