ಉದಯವಾಹಿನಿ, ಉಡುಪಿ: ಮೊಬೈಲ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಯುವತಿಯ ಕತ್ತು ಮತ್ತು ಎದೆಗೆ ಪಾಗಲ್ ಪ್ರೇಮಿಯೊಬ್ಬ ಚಾಕು ಇರಿದಿರುವುದು ಬ್ರಹ್ಮಾವರದ ಕೊಕ್ಕರ್ಣೆಯಲ್ಲಿ ನಡೆದಿದೆ. ಚಾಕು ಇರಿತಕ್ಕೊಳಗಾದ ಯುವತಿಯನ್ನು ರಕ್ಷಿತಾ ಪೂಜಾರಿ (24) ಎಂದು ಗುರುತಿಸಲಾಗಿದೆ. ಯುವತಿಯ ಪಕ್ಕದ ಮನೆಯ ಕಾರ್ತಿಕ್ ಚಾಕು ಇರಿದ ಯುವಕನಾಗಿದ್ದಾನೆ. ಯುವತಿಯ ಸ್ಥಿತಿ ಗಂಭೀರವಾಗಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಬ್ಬರ ಮದುವೆಗೆ ಯುವತಿಯ ಕುಟುಂಬದಿಂದ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೇ ಕಾರಣಕ್ಕೆ ಯುವತಿ ಆತನ ನಂಬರ್‌ನ್ನು ಬ್ಲಾಕ್ ಮಾಡಿದ್ದಳು. ಇದರಿಂದ ಕೋಪಗೊಂಡ ಕಾರ್ತಿಕ್, ಆಕೆ ಮನೆಯಿಂದ ಬಸ್ ನಿಲ್ದಾಣಕ್ಕೆ ಹೋಗುವಾಗ ಹಿಂಬಾಲಿಸಿ ಚಾಕು ಇರಿದಿದ್ದಾನೆ.
ಗಂಭೀರವಾಗಿ ಗಾಯಗೊಂಡಿರುವ ಯುವತಿಗೆ ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇನ್ನೂ ಚಾಕು ಇರಿದ ಯುವಕ ತಲೆಮರೆಸಿಕೊಂಡಿದ್ದಾನೆ.
