
ಉದಯವಾಹಿನಿ, ಬೆಂಗಳೂರು: ಧರ್ಮಸ್ಥಳ ಪ್ರಕರಣಗಳಲ್ಲಿ ಏನೇ ದೂರು, ಆರೋಪ ಇದ್ದರೂ ಎಸ್‌ಐಟಿ ಅಧಿಕಾರಿಗಳೇ ಪರಿಶೀಲಿಸಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಧರ್ಮಸ್ಥಳದ 3 ಲಾರ್ಡ್ಜ್‌ಗಳಲ್ಲಿ ನಾಲ್ಕು ಅನುಮಾನಸ್ಪದ ಸಾವುಗಳಾಗಿವೆ ಎಂದು ಮಹೇಶ್ ಶೆಟ್ಟಿ ತಿಮರೋಡಿ ದೂರು ಕೊಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದರು. ದೂರು ತೆಗೆದುಕೊಳ್ಳಬೇಕೇ, ಬೇಡವೇ ಅಂತ ಎಸ್‌ಐಟಿಯವರು ಪರಿಶೀಲಿಸುತ್ತಾರೆ. ಪ್ರಕರಣ ಬೇರೆ ಬೇರೆ ದಿಕ್ಕಿಗೆ ಹೋಗುವಂತಹ ಪ್ರಯತ್ನ ನಡೆದರೆ, ಎಸ್‌ಐಟಿಯವರು ಬೇರೆ ತರಹ ತನಿಖೆ ಮಾಡುತ್ತಾರೆ ಎಂದರು.
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಬಗ್ಗೆ ವಿಠಲಗೌಡ (Vittal Gowda) ಆರೋಪದ ಬಗ್ಗೆ ಮಾತಾಡಿದ ಅವರು, ಯಾರೋ ಕೊಟ್ಟ ಹೇಳಿಕೆ ಮೇಲೆ ನಾವು ತೀರ್ಮಾನ ಮಾಡುವುದಿಲ್ಲ. ಎಸ್‌ಐಟಿ ಮುಂದೆ ಏನು ದೂರು ಕೊಟ್ಟಿರುತ್ತಾರೆ. ಅದಕ್ಕೆ ಸಾಕ್ಷ್ಯ ಕೊಟ್ಟಿರುತ್ತಾರೆ. ಅದೆಲ್ಲವನ್ನು ನೋಡಿ ಎಸ್‌ಐಟಿಯವರು ತೀರ್ಮಾನ ಮಾಡುತ್ತಾರೆ. ಸರ್ಕಾರದ ಅನುಮತಿ ಬೇಕೆಂದರೆ ಕೇಳುತ್ತಾರೆ. ಸದ್ಯಕ್ಕೆ ಯಾವುದೇ ಅನುಮತಿ ಕೇಳುವುದಕ್ಕೆ ಬಂದಿಲ್ಲ ಎಂದು ತಿಳಿಸಿದರು.
