ಉದಯವಾಹಿನಿ, ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿದ ಭಾರಿ ಮಳೆ, ಭೂಕುಸಿತ ಮತ್ತು ಪ್ರತಿಕೂಲ ಹವಾಮಾನದ ಕಾರಣದಿಂದ ಸ್ಥಗಿತಗೊಂಡಿದ್ದ ವೈಷ್ಣೋ ದೇವಿ ಯಾತ್ರೆ ಪುನರಾರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ʼʼಸೆಪ್ಟೆಂಬರ್ 14ರಂದು ವೈಷ್ಣೋ ದೇವಿ ಯಾತ್ರೆಯನ್ನು ಮತ್ತೆ ಆರಂಭಿಸಲಾಗುತ್ತದೆʼʼ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭೂಕುಸಿತ, ಮೇಘಸ್ಫೋಟ ಸೇರಿದಂತೆ ಪ್ರತಿಕೂಲ ಹವಾಮಾನದ ಕಾರಣದಿಂದ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ವೈಷ್ಣೋದೇವಿ ದೇವಾಲಯದ ಯಾತ್ರೆ ಕಳೆದ 19 ದಿನಗಳಿಂದ ಸ್ಥಗಿತಗೊಂಡಿತ್ತು.
ಜೈ ಮಾತಾಜಿ. ವಾತಾವರಣ ಉತ್ತಮವಾಗಿದ್ದರೆ ವೈಷ್ಣೋ ದೇವಿ ಯಾತ್ರೆ ಸೆಪ್ಟೆಂಬರ್ 14ರಂದು ಪುನರಾರಂಭಗೊಳ್ಳಲಿದೆ. ವಿವರಗಳಿಗೆ ಮತ್ತು ಬುಕ್ಕಿಂಗ್‌ಗಾಗಿ ವೆಬ್‌ಸೈಟ್ ವಿಳಾಸ www.maavaishnodevi.orgಗೆ ಭೇಟಿ ನೀಡಿʼʼ ಎಂದು ಶ್ರೀ ಮಾತಾ ವೈಷ್ಣೋ ದೇವಿ ಶ್ರಿನ್ ಬೋರ್ಡ್ (SMVDB) ಎಕ್ಸ್ ಪೋಸ್ಟ್‌ನಲ್ಲಿ ತಿಳಿಸಿದೆ.
