ಉದಯವಾಹಿನಿ, ವಿಜಯಪುರ: ಕಾಂಗ್ರೆಸ್ ಪಕ್ಷದ ಅಂತ್ಯ ಮದ್ದೂರಿನಿಂದಲೇ ಪ್ರಾರಂಭ, ಇದಕ್ಕೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಹಿಂದೂಗಳೇ ಸಾಕ್ಷಿ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ತಮ್ಮ ವಿರುದ್ಧ ಮದ್ದೂರಿನಲ್ಲಿ ದಾಖಲಾಗಿರುವ ಎಫ್‌ಐಆರ್ ವಿಚಾರವಾಗಿ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಸರ್ಕಾರ ಅದೆಷ್ಟೇ ಎಫ್‌ಐಆರ್ ದಾಖಲಿಸಿದರೂ ಕೂಡ ನಾನು ವಿಚಲಿತನಾಗುವುದಿಲ್ಲ. ಹಿಂದೂಗಳ ಉತ್ಸವ, ಆಚರಣೆಗಳನ್ನು ಗುರಿಯಾಗಿಸಿಕೊಂಡು ಶಾಂತಿ ಕದಡುತ್ತಿರುವ ದುಷ್ಟ ಶಕ್ತಿಗಳ ಹೆಡೆಮುರಿಕಟ್ಟಲು ರಾಜ್ಯ ಸರ್ಕಾರಕ್ಕೆ ಆಗುತ್ತಿಲ್ಲ. ಹೀಗಾಗಿ ಹಿಂದೂಗಳ ಹಕ್ಕುಗಳನ್ನು ಪ್ರತಿಪಾದಿಸಿದ ನಮ್ಮಂತವರ ಮೇಲೆ ಕೇಸು ಹಾಕುತ್ತಿದೆ. ಹೆದರಿಸುವ, ಬೆದರಿಸುವ ಪ್ರಯತ್ನಕ್ಕೆ ಜಗ್ಗುವ ಮಾತೆ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಮದ್ದೂರಿನಲ್ಲಿ ಮಾಡಿದ ಭಾಷಣಕ್ಕಾಗಿ ನನ್ನ ಮೇಲೆ ರಾಜ್ಯ ಸರ್ಕಾರ ಎಫ್‌ಐಆರ್ ದಾಖಲಿಸಿದೆ. ಸರ್ಕಾರ ಅದೆಷ್ಟೇ ಎಫ್‌ಐಆರ್‌ಗಳನ್ನು ಹಾಕಿದರೂ ಸಹ ನಾನು ವಿಚಲಿತನಾಗುವುದಿಲ್ಲ. ಗೋಮಾತೆಯ ಕೆಚ್ಚಲನ್ನು ಕತ್ತರಿಸಿದಾಗ, ಗಣೇಶ ವಿಸರ್ಜನೆ ನಡೆಯುತ್ತಿರುವಾಗ ಕಲ್ಲು ತೂರಾಟ ನಡೆಸಿದವರ ಮೇಲೆ, ಮಸೀದಿಯಲ್ಲಿ ಕಲ್ಲು ಶೇಖರಣೆ ಮಾಡಿ ಗಣೇಶನ ಮೆರವಣಿಗೆ ಹೋಗುತ್ತಿರುವಾಗ ಕಲ್ಲು ತೂರಿದವರ ಮೇಲೆ ಮೊದಲು ಕ್ರಮ ಕೈಗೊಳ್ಳಲಿ.

Leave a Reply

Your email address will not be published. Required fields are marked *

error: Content is protected !!