ಉದಯವಾಹಿನಿ,ಬೆಂಗಳೂರು: ಇಂದು ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದ ಗುತ್ತಿಗೆದಾರರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಎಸ್ಸಿ, ಎಸ್ಟಿ ಸಮುದಾಯದ ಗುತ್ತಿಗೆದಾರರಿಗೆ ನೀಡಲಾಗುವಂತ ಟೆಂಡರ್ ಮಿತಿಯನ್ನು ಹೆಚ್ಚಳಗೊಳಿಸಲಾಗಿದೆ. ಈ ಕುರಿತಂತೆ ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ಮುಕ್ತಾಯಗೊಂಡ ನಂತ್ರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು, ಚಂದಾಪುರ ಒಳಚರಂಡಿ ಯೋಜನೆಗೆ 106 ಕೋಟಿ ಅನುದಾನ ನೀಡಲು ನಿರ್ಧರಿಸಲಾಗಿದೆ ಎಂದರು. ಸ್ಮಾರ್ಟ್ ಸಿಟಿ ಯಡಿ ಕಾಮಗಾರಿಗಳ ಪೂರ್ಣಗೊಳಿಸಲು ಸಮಯ ವಿಸ್ತರಣೆ ಮಾಡಲಾಗುತ್ತಿದೆ. 920 ಕೋಟಿ ಅನುದಾನಕ್ಕೆ ಸಂಪುಟ ಒಪ್ಪಿಗೆ ನೀಡಲಾಗಿದೆ. ಎಸ್ಸಿ,ಎಸ್ಟಿ ಗುತ್ತಿಗೆದಾರರಿಗೆ ಟೆಂಡರ್ ಮಿತಿ ಹೆಚ್ಚಳ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. 50 ಲಕ್ಷದಿಂದ 1 ಕೋಟಿಗೆ ಎಸ್ಸಿ, ಎಸ್ಟಿ ಗುತ್ತಿಗೆದಾರರ ಟೆಂಡರ್ ಮಿತಿಯನ್ನು ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ. ರಸ್ತೆ ಸುರಕ್ಷತಾ ಕಾಯ್ದೆಗೆ ತಿದ್ದುಪಡಿಗೆ ಸಂಪುಟ ಒಪ್ಪಿಗೆ ಸೂಚಿಸಲಾಗಿದೆ ಎಂದರು.
