ಉದಯವಾಹಿನಿ, ನವದೆಹಲಿ: ಏಷ್ಯಾ ಕಪ್‌ನಲ್ಲಿ ನಾಳೆ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ತೀವ್ರ ಟೀಕೆ ವ್ಯಕ್ತವಾಗಿದ್ದು, ಪ್ರತಿಭಟನೆಗಳು ರಾಜಕೀಯ ತಿರುವು ಪಡೆದುಕೊಂಡಿವೆ.
ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ 26 ಜನರನ್ನು ಬಲಿತೆಗೆದುಕೊಂಡ ಪಹಲ್ಗಾಮ್ ಭಯೋತ್ಪಾದಕ ದಾಳಿಯು ಉಭಯ ದೇಶಗಳ ನಡುವಿನ ಬಿಕ್ಕಟ್ಟಿಗೆ ಕಾರಣವಾಗಿದೆ. ಘಟನೆಯಾದ ಬಳಿಕ ಭಾರತ ಮತ್ತು ಪಾಕಿಸ್ತಾನ ತಂಡಗಳು ಇದೇ ಮೊದಲ ಬಾರಿಗೆ ಮುಖಾಮುಖಿಯಾಗುತ್ತಿದ್ದು, ತೀವ್ರ ಟೀಕೆಗೆ ಗುರಿಯಾಗಿದೆ. ದಾಳಿಯಲ್ಲಿ ಮೃತಪಟ್ಟ ತಮ್ಮ ಪುತ್ರರ ಬಗ್ಗೆ ಕುಟುಂಬಗಳು ಇನ್ನೂ ಶೋಕದಲ್ಲಿದ್ದಾವೆ. ಹಲವಾರು ರಾಜಕೀಯ ನಾಯಕರು ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಿ ಕ್ರಿಕೆಟಿಗರೊಂದಿಗೆ ಆಟವಾಡುವುದು ತಪ್ಪು ಎಂದು ಹೇಳಿದ್ದಾರೆ. ಏಷ್ಯಾ ಕಪ್‌ನಲ್ಲಿ ಎರಡೂ ತಂಡಗಳು ಆಡಲು ಮುಂದಾಗಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.‌
ಭಾರತ-ಪಾಕ್‌ ಆಟಕ್ಕೆ ವಿರೋಧ ವ್ಯಕ್ತವಾಗಿರುವುದು ರಾಜಕೀಯ ತಿರುವು ಪಡೆದುಕೊಂಡಿದೆ. ರಾಜಕೀಯ ನಾಯಕರು ಮತ್ತೊಮ್ಮೆ ಪಂದ್ಯವನ್ನು ಬಹಿಷ್ಕರಿಸುವಂತೆ ಕರೆ ಒತ್ತಾಯಿಸಿದ್ದಾರೆ. ಟೀಕೆಗಳು ಹೆಚ್ಚಾಗಿ ವಿರೋಧ ಪಕ್ಷಗಳಿಂದಲೇ ಕೇಳಿಬರುತ್ತಿವೆ. ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ಆಮ್ ಆದ್ಮಿ ಪಕ್ಷ (ಎಎಪಿ) ಪಂದ್ಯವನ್ನು ವಿರೋಧಿಸಿವೆ.
ಎಎಪಿ ನಾಯಕರು ಮತ್ತು ಕಾರ್ಯಕರ್ತರು ತಮ್ಮ ಕಚೇರಿಯ ಹೊರಗೆ ಪಾಕಿಸ್ತಾನ ಲೇಬಲ್ ಹೊಂದಿರುವ ಪ್ರತಿಕೃತಿಯನ್ನು ದಹಿಸಿದ್ದಾರೆ. ಮಾಜಿ ಸಚಿವ ಸೌರಭ್ ಭಾರದ್ವಾಜ್ ಪಂದ್ಯದ ನೇರ ಪ್ರಸಾರ ಮಾಡುವ ಕ್ಲಬ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ಬಹಿಷ್ಕರಿಸುವಂತೆ ಸಾರ್ವಜನಿಕವಾಗಿ ಮನವಿ ಮಾಡಿದ್ದಾರೆ. ‘ನಮ್ಮ ಸಹೋದರಿಯರ ಸಿಂಧೂರವನ್ನು ಅಳಿಸುವ ಇಂತಹ ಅಸಹ್ಯಕರ ಜನರೊಂದಿಗೆ ಭಾರತ ಸರ್ಕಾರ ಕ್ರಿಕೆಟಿಗರನ್ನು ಆಡುವಂತೆ ಮಾಡುತ್ತಿದೆ. ಭಾರತ-ಪಾಕಿಸ್ತಾನ ಪಂದ್ಯಗಳನ್ನು ಪ್ರಸಾರ ಮಾಡುವ ದೆಹಲಿಯಲ್ಲಿರುವ ಎಲ್ಲಾ ಕ್ಲಬ್‌ಗಳು ಮತ್ತು ರೆಸ್ಟೋರೆಂಟ್‌ಗಳನ್ನು ನಾವು ಬಹಿರಂಗಪಡಿಸುತ್ತೇವೆ’ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!